ಬೆಂಗಳೂರು:ಹಾಲಿನ ದರವನ್ನು ಹೆಚ್ಚಿಸುವುದಿಲ್ಲ ಮತ್ತು ಆಯಾ ಹಾಲು ಒಕ್ಕೂಟಗಳು ರೈತರಿಗೆ ಹೆಚ್ಚಿನ ಬೆಲೆ ನೀಡಬಹುದು ಎಂದು ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ ಸೋಮವಾರ ಸ್ಪಷ್ಟಪಡಿಸಿದ್ದಾರೆ.
ಇಲ್ಲಿನ ಸರ್ಕಾರಿ ಅತಿಥಿ ಗೃಹದಲ್ಲಿ ಸಚಿವರು ಮಾದ್ಯಮಗಳೊಂದಿಗೆ ಮಾತನಾಡಿದರು. ಹಾಲಿನ ದರ ಏರಿಕೆಗೆ ಯಾವುದೇ ಪ್ರಸ್ತಾವನೆ ಇಲ್ಲ, ಸರ್ಕಾರ ಇದರಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಹೇಳಿದ್ದಾರೆ.
ಇನ್ನು ಚಂದ್ರು ಹತ್ಯೆ ಪ್ರಕರಣ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಪ್ರಕರಣವನ್ನು ಸಿಬಿಐಗೆ ವಹಿಸಲಾಗಿದೆ. ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ನಿರ್ವಹಿಸಲಿದ್ದಾರೆ ಮತ್ತು ಕೃತ್ಯ ಎಸಗಿದವರಿಗೆ ಶಿಕ್ಷೆಯಾಗಲಿದೆ ಎಂದು ಸೋಮಶೇಖರ್ ಹೇಳಿದರು.
PublicNext
11/04/2022 06:15 pm