ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಇಂದಿನಿಂದ GST ಮಂಡಳಿ ಸಭೆ ಆರಂಭ

ಚಂಡೀಗಡ:ಇಂದಿನಿಂದ ಎರಡು ದಿನಗಳ ಕಾಲ ಚಂಡೀಗಡದಲ್ಲಿ ಸರಕು ಸೇವಾ ತೆರಿಗೆ ಮಂಡಿಯ ಬಹುನಿರಿಕ್ಷಿತ ಸಭೆ ನಡೆಯಲಿದೆ.

ಸಭೆಯಲ್ಲಿ ಕೇಂದ್ರ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್, ಕರ್ನಾಟಕದ ಹಣಕಾಸು ಸಚಿವರೂ ಆಗಿರುವ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಎಲ್ಲ ರಾಜ್ಯಗಳ ಹಣಕಾಸು ಸಚಿವರು ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಇನ್ನು ಸಭೆಯಲ್ಲಿ ಹಾಲಿ ಚಾಲ್ತಿಯಲ್ಲಿರುವ ಜಿಎಸ್ ಟಿ ಸ್ಲ್ಯಾಬ್ ಗಳಲ್ಲಿ ಅಗತ್ಯ ಬದಲಾವಣೆ ತರುವುದು, ಹೊಸ ಸರಕು ಸೇವೆಗಳನ್ನು ಜಿಎಸ್ ಟಿ ವ್ಯಾಪ್ತಿಗೆ ತರುವುದೂ ಸೇರಿದಂತೆ ಹಲವು ಅಂಶಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ.ಪೆಟ್ರೋಲ್ ಮತ್ತು ಇತರ ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್ ಟಿ ವ್ಯಾಪ್ತಿಗೆ ಸೇರಿಸಿದರೆ ಪೆಟ್ರೋಲ್ ದರವು ಲೀಟರ್ಗೆ 33 ರೂಪಾಯಿ ಕಡಿಮೆಯಾಗಬಹುದು. ಇದರಿಂದ ಜನಸಾಮಾನ್ಯರಿಗೆ ಅನುಕೂಲವಾಗಬಹುದು ಎಂದು ವಿಶ್ಲೇಷಿಸಲಾಗುತ್ತಿದೆ.

ಆದರೆ ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್ಟಿ ವ್ಯಾಪ್ತಿಗೆ ತಂದರೆ ರಾಜ್ಯ ಸರ್ಕಾರಗಳಿಗೆ ಪೆಟ್ರೊಲ್, ಡೀಸೆಲ್ ಮೇಲೆ ವ್ಯಾಟ್ ವಿಧಿಸಲು ಅವಕಾಶ ಸಿಗುವುದಿಲ್ಲ. ಇದರಿಂದಾಗಿ ರಾಜ್ಯ ಸರ್ಕಾರಗಳ ಆದಾಯಕ್ಕೆ ಧಕ್ಕೆಯೊದಗುವ ಅಪಾಯವು ಇದೆ.ಒಟ್ಟಿನಲ್ಲಿ ಸಭೆಯಲ್ಲಿ ನಿರ್ಧಾರಗಳು ಜನರ ಮೇಲೆ ಹೇಗೆ ಪರಿಣಾಮ ಬೀರಲಿವೆ ಎನ್ನುವುದನ್ನು ಕಾದು ನೋಡಬೇಕಿದೆ.

Edited By : Nirmala Aralikatti
PublicNext

PublicNext

28/06/2022 03:17 pm

Cinque Terre

28.66 K

Cinque Terre

0

ಸಂಬಂಧಿತ ಸುದ್ದಿ