ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಬೈ ಎಲೆಕ್ಷನ್ ಸಾಕಷ್ಟು ಕುತೂಹಲ ಕೆರಳಿಸಿದೆ.
ಯಾವ ಪಕ್ಷದಿಂದ ಯಾವ ಅಭ್ಯರ್ಥಿ ಚುನಾವಣಾ ಕಣಕ್ಕೆ ಇಳಿಯಲಿದ್ದಾರೆ ಎನ್ನುವ ಕುತೂಹಲಕ್ಕೆ ಕಾಂಗ್ರೆಸ್ ತೆರೆ ಎಳೆದಿದೆ.
ಶಿರಾ ಮತ್ತು ರಾಜರಾಜೇಶ್ವರಿನಗರ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗಿದೆ.
ಈ ಕುರಿತಂತೆ ಎಐಸಿಸಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, 136ನೇ ವಿಧಾನಸಭಾ ಕ್ಷೇತ್ರವಾದಂತ ಶಿರಾಗೆ ಟಿಬಿ ಜಯಚಂದ್ರ ಹಾಗೂ 154ನೇ ವಿಧಾನಸಭಾ ಕ್ಷೇತ್ರವಾದಂತ ರಾಜರಾಜೇಶ್ವರಿ ನಗರಕ್ಕೆ ಡಿಕೆ ರವಿ ಅವರ ಪತ್ನಿ ಕುಸುಮಾ ಹೆಚ್ ಅವರಿಗೆ ಟಿಕೆಟ್ ನೀಡಲಾಗಿದೆ.
PublicNext
07/10/2020 02:11 pm