ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಿವಾಸದಲ್ಲಿ ಸಿಬಿಐ ಅಧಿಕಾರಿಗಳು ಸೋಮವಾರ ಬೆಳಿಗ್ಗೆ ಆರಂಭಿಸಿದ್ದ ಶೋಧ ಕಾರ್ಯಾಚರಣೆ ಅಂತ್ಯಗೊಂಡಿದೆ. ದಾಳಿ ವೇಳೆ 57 ಲಕ್ಷ ರೂ. ಮತ್ತು ಹಲವು ದಾಖಲೆಗಳನ್ನು ತನಿಖಾ ತಂಡ ವಶಕ್ಕೆ ಪಡೆದಿದೆ.
ಈ ಕುರಿತು ಮಾಹಿತಿ ನೀಡಿರುವ ಸಿಬಿಐ ಅಧಿಕಾರಿಗಳು, 74.93 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಹೊಂದಿರುವ ಆರೋಪದ ಮೇಲೆ ಡಿ.ಕೆ.ಶಿವಕುಮಾರ್ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಕರ್ನಾಟಕದ ಒಂಬತ್ತು, ದೆಹಲಿಯ ನಾಲ್ಕು ಮತ್ತು ಮುಂಬೈನ ಒಂದು ಸ್ಥಳಗಳ ಮೇಲೆ ದಾಳಿ ನಡೆಸಲಾಗಿದೆ. ದಾಳಿಯ ವೇಳೆ 57 ಲಕ್ಷ ರೂ. ನಗದು, ಆಸ್ತಿ ಒಡೆತನಕ್ಕೆ ಸಂಬಂಧಿಸಿದ ದಾಖಲೆಗಳು, ಬ್ಯಾಂಕ್ ದಾಖಲೆಗಳು ಮತ್ತು ಕಂಪ್ಯೂಟರ್ ಹಾರ್ಡ್ ಡಿಸ್ಕ್ ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದ್ದಾರೆ.
PublicNext
05/10/2020 07:24 pm