ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಿಬಿಐ ಅಧಿಕಾರಿಗಳು ಮನೆಯಲ್ಲಿ ಸೀರೆ, ಪ್ಯಾಂಟ್ ಹೀಗೆ ಎಲ್ಲ ಲೆಕ್ಕ ತೆಗೆದುಕೊಂಡಿದ್ದಾರೆ: ಡಿಕೆಶಿ

ಬೆಂಗಳೂರು: ಸಿಬಿಐ ಅಧಿಕಾರಿಗಳು ಮನೆಯಲ್ಲಿ ಸೀರೆ, ಪ್ಯಾಂಟ್ ಹೀಗೆ ಎಲ್ಲ ಲೆಕ್ಕ ತೆಗೆದುಕೊಂಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಗುಡುಗಿದ್ದಾರೆ.

ಮನೆಯ ಮುಂದೆ ಜಮಾಯಿಸಿದ್ದ ಅಭಿಮಾನಿಗಳು ಮತ್ತು ಕಾಂಗ್ರೆಸ್‌ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಸರ್ಕಾರ ಹೇಳಿದಂತೆ ಅಧಿಕಾರಿಗಳು ಕೇಳುತ್ತಾರೆ. ಸಿಬಿಐನವರಿಗೆ ವೃತ್ತಿಪರತೆ ಇದೆ. ಇ.ಡಿ ಅಧಿಕಾರಿಗಳು ಈ ರೀತಿ ಅಲ್ಲ. 30 ವರ್ಷಗಳ ರಾಜಕಾರಣದಲ್ಲಿ ಪಕ್ಷದ ಕಾರ್ಯಕರ್ತನಾಗಿ, ಶಾಸಕನಾಗಿ, ಸಚಿವನಾಗಿ, ಸಂಸದನಾಗಿ ನಾನು ಯಾವುದೇ ತಪ್ಪು ಮಾಡಿಲ್ಲ ಎಂದು ಹೇಳಿದರು.

ಈ ಡಿ.ಕೆ.ಶಿವಕುಮಾರ್‌ ಹೆದರುವ ಮಗ ಅಲ್ಲ, ಕುತಂತ್ರಕ್ಕೆ ಹೆದರುವ ಮಗ ನಾನಲ್ಲ. ದಾಳಿ ಮಾಡಿ ನನ್ನ ಬಾಯಿ ಮುಚ್ಚಿಸಲು ಯತ್ನಿಸುವವರಿಗೆ ದೇವರು ಒಳ್ಳೆಯದು ಮಾಡಲಿ. ನಾನು ಅಧಿಕಾರಕ್ಕೆ ಅಂಟಿ ಕುಳಿತುಕೊಳ್ಳುವವನಲ್ಲ. ಉಪ ಚುನಾವಣೆ ಮುಗಿಯುವರೆಗೆ ಈ ದಾಳಿ ಮುಂದುವರಿಯಲಿದೆ ಎಂದು ಕಿಡಿಕಾರಿದರು.

Edited By : Vijay Kumar
PublicNext

PublicNext

05/10/2020 07:10 pm

Cinque Terre

60.69 K

Cinque Terre

11