ಬೆಂಗಳೂರು : ಇಂದು ಬೆಳಗ್ಗೆ ಏಕಾಏಕಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಅವರ ಸಹೋದರ ಡಿ.ಕೆ. ಸುರೇಶ್ ಮನೆ ಮೇಲೆ ಸಿಬಿಐ ದಾಳಿ ನಡೆಸಿದೆ.
ರಾಜಕೀಯ ದ್ವೇಷದ ಕಾರಣಕ್ಕೆ ಡಿ.ಕೆ. ಸಹೋದರರ ಮನೆ ದಾಳಿ ನಡೆಸಲಾಗಿದೆ, ನಾನು ಇದನ್ನು ಬಲವಾಗಿ ಖಂಡಿಸುತ್ತೇನೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
'ಬಿಜೆಪಿ ಪಕ್ಷ ದ್ವೇಷ ರಾಜಕಾರಣ ಮಾಡುವುದು ಹೊಸತೇನಲ್ಲ. ಈ ಮೂಲಕ ಸಾರ್ವಜನಿಕರ ಗಮನ ಸೆಳೆಯುವುದನ್ನು ಆಗಾಗ ಮಾಡುತ್ತಲೇ ಇರುತ್ತದೆ.
ಡಿ.ಕೆ. ಶಿವಕುಮಾರ್ ಅವರ ಮನೆ ಮೇಲೆ ನಡೆದಿರುವ ಸಿಬಿಐ ದಾಳಿ ಅದಕ್ಕೆ ತಾಜಾ ಉದಾಹರಣೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮನೆ ಮೇಲೆ ದಾಳಿ ನಡೆಸುವ ಮೂಲಕ ಆರ್ಆರ್ ನಗರ ಮತ್ತು ಶಿರಾ ಉಪಚುನಾವಣೆಯ ವೇಳೆ ಮತದಾರರ ಗಮನವನ್ನು ತನ್ನತ್ತ ಸೆಳೆಯಲು ಬಿಜೆಪಿ ಪ್ರಯತ್ನಿಸುತ್ತಿದೆ.
ನಾವು ಉಪಚುನಾವಣೆಗೆ ಸಿದ್ಧತೆ ಮಾಡಿಕೊಳ್ಳಬಾರದೆಂದು ಈ ದಾಳಿ ನಡೆಸಿರುವ ಬಿಜೆಪಿಯ ನಡೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ.
ಇದು ಬಿಜೆಪಿ ನಾಯಕರ ನೈತಿಕ ದಿವಾಳಿತನವನ್ನು ತೋರಿಸುತ್ತದೆ' ಎಂದು ಸಿದ್ದು ಸಿಡಿಮಿಡಿಗೊಂಡಿದ್ದಾರೆ.
PublicNext
05/10/2020 11:31 am