ಬೆಂಗಳೂರು: ಡೆಡ್ಲಿ ಕೊರೊನಾಗೆ ಕೇಂದ್ರ ಸಚಿವ ಸುರೇಶ್ ಅಂಗಡಿ ನಿಧನರಾಗಿದ್ದು, ಸಂಸದರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಸಿಎಂ ಯಡಿಯೂರಪ್ಪ, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ದೇಶದ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಶ್ರೀ ಸುರೇಶ್ ಅಂಗಡಿ ಅವರು ಅಸಾಧಾರಣ ಕಾರ್ಯಕರ್ತರಾಗಿದ್ದರು. ಅವರು ಕರ್ನಾಟಕದಲ್ಲಿ ಪಕ್ಷವನ್ನು ಬಲಪಡಿಸಲು ಶ್ರಮಿಸಿದ್ದರು. ಅವರ ನಿಧನವು ದುಃಖ ತಂದಿದೆ" ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.
ಸಿಎಂ ಯಡಿಯೂರಪ್ಪ ಟ್ವೀಟ್ ಮಾಡಿ, ಶ್ರೀ ಸುರೇಶ್ ಅಂಗಡಿಯವರ ಹಠಾತ್ ಅಗಲಿಕೆಗೆ ಅತೀವ ಸಂತಾಪವನ್ನು ವ್ಯಕ್ತಪಡಿಸುತ್ತಾ, ಭಗವಂತ ಅವರ ಆತ್ಮಕ್ಕೆ ಸದ್ಗತಿಯನ್ನು ನೀಡಲಿ, ಅವರ ಕುಟುಂಬದವರಿಗೆ, ಬಂಧು ವರ್ಗದವರಿಗೆ, ಅಪಾರ ಅಭಿಮಾನಿಗಳಿಗೆ ಮತ್ತು ಕಾರ್ಯಕರ್ತರಿಗೆ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ. ಹಿರಿಯ ನಾಯಕರು, ಕೇಂದ್ರ ರೈಲ್ವೆ ರಾಜ್ಯ ಸಚಿವ ಶ್ರೀ ಸುರೇಶ್ ಅಂಗಡಿ ಅವರ ಅಕಾಲಿಕ ನಿಧನದ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ. ಇದನ್ನು ನಂಬಲಿಕ್ಕೆ ಸಾಧ್ಯವಾಗುತ್ತಿಲ್ಲ. ಸಭ್ಯ, ಸೌಮ್ಯ ಸ್ವಭಾವದವರಾಗಿ, ಜನಪ್ರಿಯ ನಾಯಕರಾಗಿದ್ದ ಸುರೇಶ್ ಅಂಗಡಿಯವಾರ ನಿಧನ, ಪಕ್ಷಕ್ಕೆ, ರಾಜ್ಯಕ್ಕೆ ಮಾತ್ರವಲ್ಲ, ಇಡೀ ದೇಶಕ್ಕೆ ಬಹುದೊಡ್ಡ ನಷ್ಟವಾಗಿದೆ ಎಂದು ದುಃಖ ವ್ಯಕ್ತಪಡಿಸಿದ್ದಾರೆ..
PublicNext
23/09/2020 11:13 pm