ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಇಂದು ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ: ಮತ್ತೊಂದು ಕೋವಿಡ್ ಮಾರ್ಗಸೂಚಿ ಪ್ರಕಟ ಸಾಧ್ಯತೆ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಆಗಸ್ಟ್ 15 ರ ಬಳಿಕ ಬೆಂಗಳೂರು ಸೇರಿ ಸೋಂಕಿನ ಪ್ರಮಾಣ ಹೆಚ್ಚಿರುವ ಜಿಲ್ಲೆಗಳಲ್ಲಿ ಕಠಿಣ ನಿಯಮ ಜಾರಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಇಂದು ಸಿಎಂ ಬಸವರಾಜ ಬೊಮ್ಮಾಯಿ ಸಚಿವರು, ಉನ್ನತಾಧಿಕಾರಿಗಳ ಜೊತೆಗೆ ಮಹತ್ವದ ಸಭೆ ನಡೆಸಲಿದ್ದು, ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಬಿಗಿ ಕ್ರಮ ಕೈಗೊಳ್ಳುವ ಕುರಿತು ಚರ್ಚೆ ನಡೆಯಲಿದೆ.

ರಾಜ್ಯದಲ್ಲಿ ಈಗಾಗಲೇ ನೈಟ್ ಕರ್ಪ್ಯೂ ಜಾರಿಯಲ್ಲಿದೆ. ಅದರ ಜೊತೆಗೆ ಬೆಂಗಳೂರಿನಲ್ಲಿ ವಾರಾಂತ್ಯ ಕರ್ಪ್ಯೂ ವಿಧಿಸುವುದು, ವರಮಹಾಲಕ್ಷ್ಮಿ ಹಬ್ಬ, ಮೊಹರಂ, ಗೌರಿಗಣೇಶ ಹಬ್ಬ, ದುರ್ಗಾಪೂಜೆ ಸೇರಿ ವಿವಿಧ ಹಬ್ಬಗಳು ಬರುವುದರಿಂದ ಜನಸಂದಣಿ ಸೇರಿದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವುದು, ಅಪಾರ್ಟ್ ಮೆಂಟ್ ಗಳ ಈಜುಕೊಳ, ಜಿಮ್ ಕೇಂದ್ರಗಳ ಮೇಲೆ ತಾತ್ಕಾಲಿಕ ನಿಷೇಧ ಹೇರುವ ಕುರಿತು ಸಮಾಲೋಚಿಸಲಿದ್ದಾರೆ ಎನ್ನಲಾಗಿದೆ.

Edited By : Nagaraj Tulugeri
PublicNext

PublicNext

14/08/2021 08:14 am

Cinque Terre

48.49 K

Cinque Terre

2

ಸಂಬಂಧಿತ ಸುದ್ದಿ