ಬೆಂಗಳೂರು: ಕೊರೊನಾ ನಿರ್ವಹಣೆ ಮತ್ತು ನೂತನ ಮಾರ್ಗಸೂಚಿ ರಚನೆ ಬಗ್ಗೆ ನಾಳೆ ಗುರುವಾರ ಸಚಿವ ಸಂಪುಟ ಸಭೆ ನಡೆಸಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, ರಾಜ್ಯದ ಜಿಲ್ಲೆಗಳಲ್ಲಿ ಹಾಗೂ ಕಸ್ಟರ್‌ಗಳಲ್ಲಿ ಕೋವಿಡ್‍ನ ಸ್ಥಿತಿಗತಿ ಹಾಗೂ ನಿರ್ವಹಣೆ, ಒಮಿಕ್ರಾನ್ ವೈರಸ್‌ನ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಗಳ ವಿವರ, ವಿವಿಧ ದೇಶಗಳಲ್ಲಿ ಒಮಿಕ್ರಾನ್ ತಳಿ ಹಾಗೂ ನೀಡಲಾಗುತ್ತಿರುವ ಚಿಕಿತ್ಸೆ ಬಗ್ಗೆ ಅಧಿಕಾರಿಗಳಿಂದ ವಿವರ ಪಡೆಯಲಾಗಿದೆ. ನಾಳೆ ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದಿದ್ದಾರೆ
PublicNext
08/12/2021 07:38 pm