ಬೆಂಗಳೂರು: ಕೊರೊನಾ ಹಾಗೂ ಒಮಿಕ್ರಾನ್ ಸೋಂಕಿನ ತೀವ್ರತೆ ನಡುವೆಯೂ ಕಾಂಗ್ರೆಸ್ ನಾಯಕರು ಮೇಕೆದಾಟು ಯೋಜನೆಗಾಗಿ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ. ಈ ಮೂಲಕ ಅವರು ಜನರ ಬದುಕಿನೊಂದಿಗೆ ಚೆಲ್ಲಾಟವಾಡುತ್ತಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಆಕ್ರೋಶಿತರಾಗಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೊರೊನಾ ನಿಯಂತ್ರಣ ಕಾಯಿದೆಯನ್ನು ಉಲ್ಲಂಘಸಿದವರ ವಿರುದ್ಧ, ರಾಮನಗರ ಜಿಲ್ಲಾಡಳಿತ ಕ್ರಮ ತೆಗೆದುಕೊಳ್ಳಲಿದೆ. ನೀರಿನ ವಿಚಾರದಲ್ಲಿ ರಾಜಕೀಯ ಮಾಡೋದೇ ಕಾಂಗ್ರೆಸ್ ನಾಯಕರ ಉದ್ದೇಶ. ಆದರೆ ನಮ್ಮ ಕಾಳಜಿ ಸಾರ್ವಜನಿಕರ ಆರೋಗ್ಯ ವಿಚಾರವಾಗಿದೆ ಎಂದು ತಿಳಿಸಿದ್ದಾರೆ.
PublicNext
10/01/2022 03:47 pm