ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಿಜೆಪಿ ನಾಯಕಿ ಖುಷ್ಬೂ ಪ್ರಯಾಣಿಸುತ್ತಿದ್ದ ಕಾರು ಅಪಘಾತ

ಚೆನ್ನೈ: ಬಿಜೆಪಿ ನಾಯಕಿ, ನಟಿ ಖುಷ್ಬೂ ಸುಂದರ್ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾದ ಘಟನೆ ತಮಿಳುನಾಡಿನ ಮೆಲ್ಮರುವಾತ್ತೂರ್‌ನಲ್ಲಿ ನಡೆದಿದೆ.

ಬುಧವಾರ ಬೆಳಿಗ್ಗೆ ಮೇಲ್‌ಮರವತ್ತೂರ್ ಸಮೀಪ ವೇಗವಾಗಿ ಬಂದ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಖುಷ್ಬೂ ಪ್ರಯಾಣಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಖುಷ್ಬೂ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಘಟನಾ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ಮಾಡಿ ತನಿಖೆ ಆರಂಭಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಖುಷ್ಬೂ, ಕಂಟೈನರ್ ವಾಹನವೇ ನಮ್ಮ ಕಾರಿಗೆ ಗುದ್ದಿದೆ. ನಮ್ಮ ಕಾರು ಸರಿಯಾದ ಮಾರ್ಗದಲ್ಲಿಯೇ ಚಲಿಸುತ್ತಿತ್ತು. ಆದರೆ ಕಂಟೈನರ್ ಏಕಾಏಕಿ ವೇಗವಾಗಿ ಬಂದು ನನ್ನ ಕಾರಿಗೆ ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ ಪೊಲೀಸರು ಬಂದಿದ್ದು, ತನಿಖೆ ನಡೆಸುತ್ತಿದ್ದಾರೆ ಎಂದು ಬರೆದುಕೊಂಡಿದ್ದಾರೆ.

Edited By : Vijay Kumar
PublicNext

PublicNext

18/11/2020 11:06 am

Cinque Terre

131.57 K

Cinque Terre

4

ಸಂಬಂಧಿತ ಸುದ್ದಿ