ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರಿನಲ್ಲಿ ರಜನಿಕಾಂತ್: ಅಣ್ಣನ ಮುಂದೆ ತಲೆ ಬಾಗಿ ಆಶೀರ್ವಾದ ಪಡೆದ ಸೂಪರ್ ಸ್ಟಾರ್

ಬೆಂಗಳೂರು: ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ರಜನಿಕಾಂತ್ ಬೆಂಗಳೂರಿಗೆ ಆಗಮಿಸಿ ಅಣ್ಣನ ಆಶೀರ್ವಾದ ಪಡೆದಿದ್ದಾರೆ.

ದಕ್ಷಿಣ ಬಾರತದ ಸೂಪರ್ ಸ್ಟಾರ್ ರಜಿನಿಕಾಂತ್ ಅವರು, ಇದೇ ಡಿಸೆಂಬರ್ 31ಕ್ಕೆ ತಮ್ಮ ಹೊಸ ಪಕ್ಷವನ್ನು ಆರಂಭಿಸುವ ಯೋಜನೆಯನ್ನು ಹಾಕಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಭಾನುವಾರ ರಾತ್ರಿ ಬೆಂಗಳೂರಿಗೆ ಬಂದಿರುವ ರಜನಿಕಾಂತ್, ಬೆಂಗಳೂರಿನಲ್ಲಿ ನೆಲೆಸಿರುವ ತಮ್ಮ ಸೋದರ ಸತ್ಯನಾರಾಯಣ್ ರಾವ್ ಅವರನ್ನು ಭೇಟಿ ಮಾಡಿ ರಾಜಕೀಯ ಪಕ್ಷ ಘೋಷಣೆ ಮಾಡುವ ಕುರಿತು ಮಾತನಾಡಿದ್ದಾರೆ.

ಹೊಸ ಪಕ್ಷ ಲಾಂಚ್ ಮಾಡುವ ಬಗ್ಗೆ ಕಳೆದ ವಾರ ಟ್ವೀಟ್ ಮಾಡಿದ್ದ ತಲೈವಾ, ಜನವರಿಯಲ್ಲಿ ರಾಜಕೀಯ ಪಕ್ಷವನ್ನು ಲಾಂಚ್ ಮಾಡಲಿದ್ದೇನೆ. ಈ ಕುರಿತು ಡಿಸೆಂಬರ್ 31ರಂದು ಪ್ರಮುಖ ಘೋಷಣೆ ಮಾಡಲಿದ್ದೇನೆ ಎಂದು ಟ್ವೀಟ್ ,ಮೂಲಕ ತಿಳಿಸಿದ್ದರು. ಡಿಸೆಂಬರ್ 31ರಂದು ರಜನಿಕಾಂತ್ ಮಾಡಲಿರುವ ಅನೌನ್ಸ್ ಮೆಂಟ್ ಏನು ಅನ್ನೋದು ಇದೀಗ ಎಲ್ಲರ ಕುತೂಹಲಕ್ಕೆ ಕೆರಳಿಸಿದೆ.

ಸ್ವಂತ ಪಕ್ಷ ಕಟ್ಟಿ ಆ ಮೂಲಕ ರಾಜಕೀಯದಲ್ಲಿ ಬದಲಾವಣೆ ತರುವುದಾಗಿ ರಜನಿ ತಿಳಿಸಿದ್ದರು. ಆದರೆ ನಂತರ ಈ ಬಗ್ಗೆ ಹೆಚ್ಚು ಅಪ್‍ಡೇಟ್ ಸಿಕ್ಕಿರಲಿಲ್ಲ. ಲೋಕಸಭಾ ಚುನಾವಣೆ ವೇಳೆ ಸಹ ರಾಜಕೀಯದ ಕುರಿತು ತಮ್ಮ ನಿರ್ಧಾರ ಘೋಷಿಸಲಿದ್ದಾರೆ ಎಂದು ಸುದ್ದಿಯಾಗಿತ್ತು. ಆದರೆ ರಜನಿಕಾಂತ್ ಇನ್ನೂ ಸಮಯ ಬೇಕು ಎಂದಿದ್ದರು. ಇದೆಲ್ಲದರ ಮಧ್ಯೆ ರಜನಿ ಬಿಜೆಪಿ ಸೇರಲಿದ್ದಾರೆ ಎನ್ನುವ ಗಾಳಿಸುದ್ದಿಯೂ ಹಬ್ಬಿತ್ತು. ಇದೆಲ್ಲದಕ್ಕೂ ಡಿಸೆಂಬರ್ 31ಕ್ಕೆ ಉತ್ತರ ಸಿಗಲಿದೆ.

Edited By : Nagaraj Tulugeri
PublicNext

PublicNext

07/12/2020 12:00 pm

Cinque Terre

80.72 K

Cinque Terre

4

ಸಂಬಂಧಿತ ಸುದ್ದಿ