ನವದೆಹಲಿ: 1947 ರಲ್ಲಿ ದೇಶಕ್ಕೆ ಸಿಕ್ಕಿದ್ದು ಸ್ವಾತಂತ್ರ್ಯ ಅಲ್ಲ, ಅದು ಭಿಕ್ಷೆ. ದೇಶಕ್ಕೆ ನೈಜ ಸ್ವಾತಂತ್ರ್ಯ 2014ರಲ್ಲಿ ಸಿಕ್ಕಿದೆ ಎಂದು ನಟಿ ಕಂಗನಾ ರಣಾವತ್ ಹೇಳಿದ್ದಾರೆ.
ಖಾಸಗಿ ವಾಹಿನಿಯ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಈ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಭಾರತಕ್ಕೆ 2014ರಲ್ಲಿ ಮೋದಿ ಅಧಿಕಾರಕ್ಕೆ ಬಂದ ಮೇಲೆ ನೈಜ ಸ್ವಾತಂತ್ರ್ಯ ಸಿಕ್ಕಿದೆ. 1947ರಲ್ಲಿ ಸಿಕ್ಕಿದ್ದು ಬರೀ ಭಿಕ್ಷೆ ಎಂದಿದ್ದಾರೆ.
24 ಸೆಕೆಂಡ್ ಇರುವ ಈ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ. ಇದಕ್ಕೂ ಮುನ್ನ ದೇಶದ ಸ್ವಾತಂತ್ರ್ಯ ಹೋರಾಟಗಾರಿಗೆ ಅವಮಾನ ಈಗ ದೇಶದ ಸ್ವಾತಂತ್ರ್ಯ ಹೋರಾಟ ಗಾಥೆಗೆ ಅವಮಾನ ಮಾಡುತ್ತಿದ್ದಾರೆ ಎಂದು ಸಾರ್ವಜನಿಕರು ಕಂಗನಾ ಮೇಲೆ ಆಕ್ರೋಶಿತರಾಗಿದ್ದಾರೆ.
PublicNext
12/11/2021 08:32 am