ಬೆಂಗಳೂರು: ಡಾ. ರಾಜ್ಕುಮಾರ್ ಪ್ರತಿಮೆ ಸ್ಥಾಪನೆ ಕುರಿತು ನೀಡಿರುವ ಹೇಳಿಕೆ ವಿವಾದಕ್ಕೆ ಕಾರಣವಾಗಿದ್ದು, ಬಳಿಕ ಫೇಸ್ ಬುಕ್ ಲೈವ್ ವಿಡಿಯೋದಲ್ಲಿ ಶಾಸಕ ಹ್ಯಾರಿಸ್ ಜನತೆಯ ಕ್ಷಮೆಯಾಚಿಸಿದ್ದಾರೆ. ಮಂಗಳವಾರ, ಫೆ. 16ರಂದು ಬೆಂಗಳೂರಿನ ದೊಮ್ಮಲೂರು ಪ್ರದೇಶದಲ್ಲಿ ವಿವಿಧ ಕಾಮಗಾರಿ ಪ್ರಗತಿ ಪರಿಶೀಲನೆ ಸಂದರ್ಭದಲ್ಲಿ ವರನಟ ಡಾ. ರಾಜ್ಕುಮಾರ್ ಕುರಿತು ವಿವಾದಿತ ಹೇಳಿಕೆ ನೀಡಿದ್ದಾರೆ ಎನ್ನಲಾದ ವಿಡಿಯೋ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದೆ. ರಾಜ್ ಕುರಿತ ಹೇಳಿಕೆ ವಿವಾದಕ್ಕೆ ಕಾರಣವಾಗುತ್ತಲೇ ಬುಧವಾರ, ಫೆ. 17ರಂದು ಸಂಜೆ ಫೇಸ್ ಬುಕ್ ಲೈವ್ ಮೂಲಕ ಕ್ಷಮೆಯಾಚಿಸಿದ್ದಾರೆ.
ನನ್ನ ವಿರುದ್ಧ ಅಪಪ್ರಚಾರ ನಡೆಸಲಾಗುತ್ತಿದೆ, ನಾನು ರಾಜ್ಕುಮಾರ್ ಅಭಿಮಾನಿಯಾಗಿದ್ದು, ನನ್ನ ಹೇಳಿಕೆಯನ್ನು ತಿರುಚಿ ಎಡಿಟ್ ಮಾಡಿ ವೈರಲ್ ಮಾಡಲಾಗಿದೆ ಎಂದು ಶಾಸಕ ಹ್ಯಾರಿಸ್ ಹೇಳಿಕೊಂಡಿದ್ದಾರೆ. ಅಲ್ಲದೆ, ಪ್ರತಿಮೆ ಸ್ಥಾಪನೆಗೆ ತಾನೂ ಕೂಡ ಶ್ರಮಿಸಿದ್ದು, ರಾಜ್ಕುಮಾರ್ ಅಭಿಮಾನಿಯಾಗಿದ್ದೇನೆ, ಈ ವಿಚಾರದಲ್ಲಿ ಯಾರಿಗಾದರೂ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ, ಈ ಸಂಗತಿಯನ್ನು ಇಲ್ಲಿಗೇ ಬಿಟ್ಟುಬಿಡಿ ಎಂದು ಹ್ಯಾರಿಸ್ ಹೇಳಿಕೆ ನೀಡಿದ್ದಾರೆ.
PublicNext
17/02/2021 10:03 pm