ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿಗೆ ಅಭಿನಂದನೆ ಸಲ್ಲಿಸಿರುವ ಕನ್ನಡ ಖ್ಯಾತ ಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಕೆಲವು ಸಲಹೆಗಳನ್ನು ನೀಡಿದ್ದಾರೆ.
ಟ್ವೀಟ್ ಮೂಲಕ ಶುಭ ಕೋರಿದ ಸಿನಿಮಾ ಮೇಷ್ಟ್ರು ನಾಗತಿಹಳ್ಳಿ ಚಂದ್ರಶೇಖರ್, ಹೈಕಮಾಂಡ್, ಲೋ ಕಮ್ಯಾಂಡ್ ಹಂಗು ಮೀರಿ ಅದ್ಭುತ ಕೆಲಸಮಾಡಿ. ಚಮಚಗಳನ್ನು ದೂರವಿಟ್ಟು ಕೆಲಸ ಮಾಡಿ ಎಂದು ಚಂದ್ರಶೇಖರ್ ಮನವಿ ಮಾಡಿದ್ದಾರೆ.
ಜೊತೆಗೆ ಬಸವರಾಜ ಬೊಮ್ಮಾಯಿ ಅವರ ಮನುಷ್ಯ ಪ್ರೀತಿ, ಸಾಹಿತ್ಯ ಪ್ರೀತಿ, ಪ್ರಾಣಿ ಪ್ರೀತಿಗೆ ಫಿದಾ ಆಗಿದ್ದಾರೆ. ಅಲ್ಲದೆ ತಾವು ನನ್ನಂಥವರಿಗೆ ಆಸೆ ಹುಟ್ಟಿಸಿದ್ದೀರಿ ಎಂದು ಚಂದ್ರಶೇಖರ್ ಹೇಳಿದ್ದಾರೆ.
PublicNext
30/07/2021 03:31 pm