ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗೋಡ್ಸೆಯ ದೇಶಪ್ರೇಮಕ್ಕೆ ಜೈ ಎಂದ ನಟಿ ಅನಿತಾ ಭಟ್

ಕನ್ನಡದ ನಟಿ ಅನಿತಾ ಭಟ್ ಇಂದು ಟ್ವಿಟ್ಟರ್‌ನಲ್ಲಿ ಕೆಲವು ಸೂಕ್ಷ್ಮ ವಿಚಾರಗಳ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ತಮ್ಮ ಅಭಿಪ್ರಾಯಗಳಿಗೆ ವಿರುದ್ಧ ಅಭಿಪ್ರಾಯ ವ್ಯಕ್ತ ಪಡಿಸಿ ಕಮೆಂಟ್ ಮಾಡಿದವರಿಗೆ ತೀಕ್ಷ್ಣ ಪ್ರತಿಕ್ರಿಯೆಗಳನ್ನೂ ನೀಡಿದ್ದಾರೆ.

ಗೋಡ್ಸೆ ಹೊಗಳಿಕೆಯಿಂದ ಆರಂಭಿಸಿ ಬ್ರಾಹ್ಮಣ, ಬ್ರಾಹ್ಮಣ್ಯ ಇತರೆ ವಿಷಯಗಳ ಕುರಿತು ಸರಣಿ ಟ್ವೀಟ್ ಮಾಡಿದ್ದಾರೆ ಅನಿತಾ ಭಟ್. ''ಗಾಂಧಿಯನ್ನು ಕೊಂದು ಎಂತಹ ದುರಂತಕ್ಕೆ ಸಿಕ್ಕಿ ಹಾಕಿಕೊಳ್ಳಬಹುದು ಅಂತ ಗೊತ್ತಿದ್ರೂ, ಅದನ್ನ ಮಾಡಿದ ಗೋಡ್ಸೆಯ ದೇಶಪ್ರೇಮಕ್ಕೆ ಜೈ. ದೇಶಕ್ಕಿಂತ ಏನೂ ದೊಡ್ಡದಲ್ಲ. ಇನ್ನೆಷ್ಟು ಚೂರಾಗ್ತಾ ಇತ್ತೋ ನಮ್ಮ ಭಾರತ'' ಎಂದಿದ್ದಾರೆ ನಟಿ.

''ಸ್ವಾತಂತ್ರ್ಯ ಹೋರಾಟದಲ್ಲಿ ಪಾಲುಗೊಂಡಿದ್ದ ಗೋಡ್ಸೆ ಯವರು ದೇಶಭಕ್ತನೇ. ಅವರನ್ನ ಭಯೋತ್ಪಾದಕ ಅಂತ ಕರಿಯೋದು ನಿಮ್ಮಗಳ ಅಜ್ಞಾನ. ಯಾರೋ ಒಬ್ಬರಿನಿಂದ ದೇಶಕ್ಕೆ ಸ್ವಂತಂತ್ರ ಬಂದಿಲ್ಲ. ಕೋಟಿಗಟ್ಟಲೆ ವೀರರು ನಮ್ಮ ದೇಶಕ್ಕಾಗಿ ಬಲಿದಾನ ಮಾಡಿದಾರೆ ಅನ್ನೋದು ಅರಿತುಕೊಂಡರೆ ಸಾಕು'' ಎಂದಿರುವ ಅನಿತಾ ಭಟ್, ನಾಥೋರಾಮ್ ಗೋಡ್ಸೆ ರಚಿತ 'ವೈ ಐ ಅಸಾಸಿನೇಟೆಡ್ ಗಾಂಧಿ' ಹೆಸರಿನ ಪುಸ್ತಕವನ್ನು ಓದುವಂತೆ ಮತ್ತೊಂದು ಟ್ವೀಟ್‌ನಲ್ಲಿ ಸಲಹೆ ಕೊಟ್ಟಿದ್ದಾರೆ.

Edited By : Nagaraj Tulugeri
PublicNext

PublicNext

18/08/2021 02:27 pm

Cinque Terre

69.29 K

Cinque Terre

64

ಸಂಬಂಧಿತ ಸುದ್ದಿ