ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಿದ್ದರಾಮಯ್ಯ ಬ್ರಾಹ್ಮಣ್ಯ ಬೇರೂರಿಸುವ ಜಾತಿವಾದಿ ನಾಯಕ: ನಟ ಚೇತನ್ ಟೀಕಾ ಪ್ರಹಾರ

ಬೆಂಗಳೂರು: ' ಮಾಜಿ ಸಿಎಂ ಸಿದ್ದರಾಮಯ್ಯ ಬ್ರಾಹ್ಮಣ್ಯವನ್ನು ಹೆಚ್ಚು ಆಳವಾಗಿ ಬೇರೂರಿಸುವ ಜಾತಿವಾದಿ ನಾಯಕ’ ಎಂದು ಚಿತ್ರನಟ ಚೇತನ್‌ ಅಹಿಂಸಾ, ಟ್ವಿಟರ್‌ನಲ್ಲಿ ಟೀಕಾ ಪ್ರಹಾರ ನಡೆಸಿದ್ದಾರೆ.

ಶನಿವಾರ ಟ್ವೀಟ್ ಮಾಡಿರುವ ಚೇತನ್ ಅದನ್ನು ತಮ್ಮ ಫೇಸ್‌ಬುಕ್ ಖಾತೆಯಲ್ಲೂ ಬರೆದುಕೊಂಡಿದ್ದಾರೆ. "ಸಿದ್ದರಾಮಯ್ಯ ಕರ್ನಾಟಕ ಮತ್ತು ಕಾಂಗ್ರೆಸ್‌ನ ಪ್ರಬಲ ನಾಯಕ. ಆದರೆ ಬ್ರಾಹ್ಮಣ್ಯವನ್ನು ಆಳವಾಗಿ ಬೇರೂರಿಸಿಕೊಂಡಿರುವ ಜಾತಿವಾದಿ ನಾಯಕ. ನಿಜವಾದ ಬದಲಾವಣೆಗೆ ಕರ್ನಾಟಕ ಮತ್ತು ಭಾರತಕ್ಕೆ ಜಾತಿ ವಿರೋಧಿ ನಾಯಕತ್ವ ಬೇಕಾಗಿದೆ. ಸಿದ್ದರಾಮಯ್ಯನವರ ಸೇವೆ ಅವರು ಹುಟ್ಟಿದ ಜಾತಿಗೆ ಮಾತ್ರ ಸೀಮಿತವಾಗಿದ್ದು, ಇತರ ಬಹು ಜನರಿಂದ ಸಿಗುವ ಮತಗಳಿಗಾಗಿ ಮಾತ್ರ ಬಣ್ಣದ ಮಾತನಾಡುತ್ತಾರೆ" ಎಂದು ಟೀಕಿಸಿದ್ದಾರೆ.

ಚೇತನ್‌ರವರ ಹೇಳಿಕೆಗೆ ಕರ್ನಾಟಕ ಜನಾಧಿಕಾರ ಪಕ್ಷದ ಅಧ್ಯಕ್ಷರಾದ ಹರೀಶ್ ಕುಮಾರ್‌ರವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯನವರು ಹೇಗೆ ಬ್ರಾಹ್ಮಣ್ಯ ಬೇರೂರಿಸುತ್ತಿದ್ದಾರೆ ಎಂಬದುನ್ನು ಉದಾಹರಣೆ ಸಹಿತ ವಿವರಿಸಬೇಕೆಂದು ಒತ್ತಾಯಿಸಿದ್ದಾರೆ.

ಚೇತನ್‌ ಅವರ ಟ್ವೀಟ್ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ಚರ್ಚೆ ನಡೆಯುತ್ತಿದೆ. ಹಲವರು ಚೇತನ್‌ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಚೇತನ್ ಬಣ್ಣ ಈಗ ಬಯಲಾಯಿತು ಎಂದು ಕೆಲವರು ವ್ಯಂಗ್ಯವಾಡಿದ್ದರೆ, ಇನ್ನೂ ಕೆಲವರು ಅವರ ಹೇಳಿಕೆಗೆ ಸಹಮತ ಸೂಚಿಸಿದ್ದಾರೆ.

Edited By : Vijay Kumar
PublicNext

PublicNext

04/09/2021 10:47 pm

Cinque Terre

91.62 K

Cinque Terre

6

ಸಂಬಂಧಿತ ಸುದ್ದಿ