ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬದುಕಿನ ಆಟ ಮುಗಿಸಿದ ಅಪ್ಪುಗೆ ಕಂಬನಿ ಮಿಡಿದ ಗಣ್ಯರು

ಬೆಂಗಳೂರು : ಅಚ್ಚುಮೆಚ್ಚಿನ ಅಪ್ಪು ಲಘು ಹೃದಯಾಘಾತದಿಂದ ಇಂದು ಬದುಕಿನ ಆಟ ಮುಗಿಸಿದ್ದಾರೆ. ಇನ್ನು ಕನ್ನಡದ ಸ್ಟಾರ್ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನಕ್ಕೆ ರಾಜಕೀಯ ಧುರೀಣರು ಸಂತಾಪ ಸೂಚಿಸಿದ್ದಾರೆ.

ಕನ್ನಡದ ಖ್ಯಾತನಟ ಶ್ರೀ ಪುನೀತ್ ರಾಜ್ ಕುಮಾರ್ ಅವರು ಹೃದಯಾಘಾತದಿಂದ ನಿಧನರಾಗಿದ್ದು ನಾನು ತೀವ್ರ ಆಘಾತಕ್ಕೆ ಒಳಗಾಗಿದ್ದೇನೆ. ಕನ್ನಡಿಗರ ಮೆಚ್ಚಿನ ನಟ ಅಪ್ಪು ನಿಧನದಿಂದ ಕನ್ನಡ ಹಾಗೂ ಕರ್ನಾಟಕಕ್ಕೆ ಅಪಾರ ನಷ್ಟ ವಾಗಿದ್ದು, ದೇವರು ಅವರ ಆತ್ಮಕ್ಕೆ ಶಾಂತಿ ಕರುಣಿಸಿ, ಅಭಿಮಾನಿಗಳಿಗೆ ಈ ನೋವನ್ನು ಸಹಿಸುವ ಶಕ್ತಿ ನೀಡಲಿಯೆಂದು ಪ್ರಾರ್ಥಿಸುತ್ತೇನೆ. ಎಂದು ಸಿಎಂ ಬೊಮ್ಮಾಯಿ ಟ್ವೀಟ್ ಮಾಡಿದ್ಧಾರೆ.

ಇನ್ನು ಮಾಜಿ ಪ್ರಧಾನಿ ದೇವಗೌಡ ಅವರು "ಕನ್ನಡ ಚಿತ್ರ ರಂಗದ ಖ್ಯಾತ ಚಿತ್ರನಟ ಯುವರತ್ನ ಪುನೀತ್ ರಾಜ್ ಕುಮಾರ್ ಅವರ ನಿಧನದ ಸುದ್ದಿ ತಿಳಿದು ಮನಸ್ಸಿಗೆ ತೀವ್ರ ಆಘಾತ ವಾಗಿದೆ. ಅವರ ನಟಿಸ್ಸಿದ್ದ ಪೃತ್ವಿ ಮತ್ತು ರಾಜಕುಮಾರ ಚಿತ್ರವನ್ನು ಅಪ್ಪು ಅವರ ಜೊತೆಯಲ್ಲೇ ನೋಡಿದ್ದೇ ಈ ದಿನ ಅವರಿಲ್ಲ ಎಂದರೆ ನಂಬಲಸಾಧ್ಯವಾಗಿದೆ. ಈ ದಿನ ಯುವರತ್ನನನ್ನು ಕಳೆದುಕೊಂಡು ನಮ್ಮ ಕರುನಾಡು ಬರಿದಾಗಿದೆ. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ. ದೇವರು ಅವರ ಕುಟುಂಬ ವರ್ಗಕ್ಕೆ ಹಾಗೂ ಅವರ ಅಭಿಮಾನಿಗಳಿಗೆ ದುಃಖ ಬರಿಸುವ ಶಕ್ತಿ ತುಂಬಲಿ, ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಟ್ವೀಟ್ ಮಾಡಿದ್ದಾರೆ.

ಸಿದ್ದರಾಮಯ್ಯ ಟ್ವೀಟ್:

ಕನ್ನಡದ ಪ್ರತಿಭಾವಂತ ಯುವ ನಟ ಪುನೀತ್ ರಾಜಕುಮಾರ್ ಹಠಾತ್ ನಿಧನದಿಂದ ಆಘಾತಕ್ಕೀಡಾಗಿದ್ದೇನೆ. ನಟನಾ ಕೌಶಲದ ಜೊತೆ ಸರಳ-ಸಜ್ಜನಿಕೆಯ ನಡವಳಿಕೆಯಿಂದಲೂ ಕನ್ನಡಿಗರ ಮನೆ ಮಗನಂತಿದ್ದ ಪುನೀತ್ ಸಾವು ತುಂಬಿಬಾರದ ನಷ್ಟ. ರಾಜ್ ಕುಮಾರ್ ಕಾಲದಿಂದಲೂ ಅವರ ಕುಟುಂಬದ ಜೊತೆಯಲ್ಲಿ ಆತ್ಮೀಯ ಸಂಬಂಧ ಹೊಂದಿದ್ದ ನನ್ನ ಪಾಲಿಗೆ ಪುನೀತ್ ಸಾವು ಮನೆ ಸದಸ್ಯನೊಬ್ಬನನ್ನು ಕಳೆದುಕೊಂಡ ಶೋಕ. ಪುನೀತ್ ಕುಟುಂಬ ಮತ್ತು ಅಭಿಮಾನಿಗಳ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ, ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಪುನೀತ್ ರಾಜಕುಮಾರ್ ನಿಧನಕ್ಕೆ ಡಿಕೆಶಿ ಕಂಬನಿ:

ನನ್ನ ನೆರೆಹೊರೆಯವರಾದ, ಸ್ವಂತ ಸಹೋದರನಂತಿದ್ದ ಪುನೀತ್ ಇನ್ನಿಲ್ಲ ಎಂಬ ಸುದ್ದಿಯನ್ನು ಅರಗಿಸಿಕೊಳ್ಳಲು ಆಗುತ್ತಿಲ್ಲ. ಇಷ್ಟು ಚಿಕ್ಕವಯಸ್ಸಿನಲ್ಲಿ ಅವರನ್ನು ಕೊಂಡೋಯ್ದ ವಿಧಿ ಬಹಳ ಕ್ರೂರಿ ಎಂದು ಶಿವಕುಮಾರ್ ಅವರು ಕಂಬನಿ ಮಿಡಿದಿದ್ದಾರೆ. ಪುನೀತ್ ಅವರು ನನಗೆ ಆತ್ಮೀಯರಾಗಿದ್ದರು. ಕುಟುಂಬದ ಸ್ನೇಹಿತರಾಗಿದ್ದರು. ನಮ್ಮಿಬ್ಬರ ಕುಟುಂಬ ಸದಸ್ಯರ ನಡುವೆ ಉತ್ತಮ ಒಡನಾಟವಿತ್ತು ಎಂದು ಹೇಳಿಕೆಯಲ್ಲಿ ಸ್ಮರಿಸಿಕೊಂಡಿದ್ದಾರೆ.

Edited By : Nirmala Aralikatti
PublicNext

PublicNext

29/10/2021 03:35 pm

Cinque Terre

61 K

Cinque Terre

3