ಬೆಂಗಳೂರು: ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ ಕಾರ್ಯಕರ್ತರು ಕನ್ನಡ ಧ್ವಜ ಸುಟ್ಟ ಘಟನೆಯನ್ನು ನಟ ಶಿವರಾಜ್‌ಕುಮಾರ್ ತೀವ್ರವಾಗಿ ಖಂಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನಾಡ ಧ್ವಜ ಸುಟ್ಟವರಿಗೆ ತಕ್ಕ ಶಿಕ್ಷೆ ಆಗಬೇಕು. ನಿಜವಾದ ಕನ್ನಡಪರ ಹೋರಾಟಗಾರರನ್ನು ಬಿಡುಗಡೆಗೊಳಿಸಿ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಒತ್ತಾಯಿಸಿದ್ದಾರೆ.
ಬೆಳಗಾವಿಯಲ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನ ಮಂಡಲ ಅಧಿವೇಶನವನ್ನು ವಿರೋಧಿಸಿ ನಾಡದ್ರೋಹಿ ಎಂಇಎಸ್ ಕಾರ್ಯಕರ್ತರು 'ಮಹಾಮೇಳಾವ' ನಡೆಸಿದ್ದರು. ಇದಕ್ಕೆ ಪ್ರತಿಭಟನೆ ವ್ಯಕ್ತಪಡಿಸಲು ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಎಂಇಎಸ್ ಮುಖಂಡ ದೀಪಕ್ ದಳವಿ ಅವರಿಗೆ ಮಸಿ ಬಳಿದಿದ್ದರು. ಇದಕ್ಕೆ ಆಕ್ರೋಶಿತರಾದ ಎಂಇಎಸ್ ಕಾರ್ಯಕರ್ತರು ಕನ್ನಡ ಧ್ವಜ ಸುಟ್ಟಿದ್ದರು.
PublicNext
16/12/2021 07:31 am