ಬೆಂಗಳೂರು: ನಟ ಹಾಗೂ ರಾಜಕಾರಣಿ ದಿಗಂಗತ ಅಂಬರೀಶ್ ಸ್ಮಾರಕ ನಿರ್ಮಾಣಕ್ಕೆ 12 ಕೋಟಿ ಅನುದಾನ ನೀಡೋದಾಗಿ ರಾಜ್ಯ ಸರ್ಕಾರ ಘೋಷಿಸಿದೆ. ಕಂಠೀರವ ಸ್ಟುಡಿಯೋ ಆವರಣದಲ್ಲೇ ಸ್ಮಾರಕ ನಿರ್ಮಿಸಲಾಗುವುದು ಎಂದು ಕಾನೂನು ಸಚಿವ ಜೆ.ಸಿ ಮಾಧುಸ್ವಾಮಿ ಹೇಳಿದ್ದಾರೆ.
ವಿಧಾನಸೌಧದಲ್ಲಿ ಕ್ಯಾಬಿನೆಟ್ ನಿರ್ಣಯಗಳ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡುತ್ತಿರುವ ಮಾಧುಸ್ವಾಮಿ, “ನಟ, ರಾಜಕಾರಣಿ ದಿಗಂಗತ ಅಂಬರೀಶ್ ಸ್ಮಾರಕ ನಿರ್ಮಾಣಕ್ಕೆ 12 ಕೋಟಿ ಅನುದಾನ ನೀಡಲಾಗುವುದು. ಕಂಠೀರವ ಸ್ವುಡಿಯೋದಲ್ಲೇ ಅಂಬರೀಶ್ ಸ್ಮಾರಕ ನಿರ್ಮಾಣ ಮಾಡಲಾಗುವುದು” ಎಂದು ತಿಳಿಸಿದ್ದಾರೆ.
PublicNext
06/01/2022 03:36 pm