ಬೆಂಗಳೂರು: 'ದಿ ಕಾಶ್ಮೀರ ಫೈಲ್ಸ್'ಗಾಗಿ ದಿವಂಗತ ನಟ ಪುನೀತ್ ರಾಜ್‌ಕುಮಾರ್ ಅಭಿನಯದ 'ಜೇಮ್ಸ್' ಸಿನಿಮಾ ಪ್ರದರ್ಶನವನ್ನು ತಡೆಯಲು ಬಿಜೆಪಿ ಹುನ್ನಾರ ನಡೆಸಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 'ನಿನ್ನೆ (ಸೋಮವಾರ) 'ಜೇಮ್ಸ್' ಚಿತ್ರದ ನಿರ್ಮಾಪಕ ಕಿಶೋರ್ ನನ್ನನ್ನು ಭೇಟಿಯಾದರು. ಈ ವೇಳೆ ಅವರು, ಬಿಜೆಪಿ ಶಾಸಕರು ಹಾಗೂ ಕಾರ್ಯಕರ್ತರು ಅನೇಕ ಚಿತ್ರಮಂದಿರಗಳಿಗೆ ಹೋಗಿ 'ಜೇಮ್ಸ್' ಸಿನಿಮಾ ಪ್ರದರ್ಶನ ನಿಲ್ಲಿಸಿ, 'ದಿ ಕಾಶ್ಮೀರ ಫೈಲ್ಸ್' ಸಿನಿಮಾ ಹಾಕುವಂತೆ ಒತ್ತಡ ಹೇರಿದ್ದಾರೆ. ಇನ್ನೂ ಹಲವು ಕಡೆ ಇದೇ ರೀತಿ ಒತ್ತಡ ಹೇರುತ್ತಿರುವುದಾಗಿ ನೋವು ತೋಡಿಕೊಂಡರು. ಬಿಜೆಪಿಯವರು 'ಕಾಶ್ಮೀರ ಫೈಲ್ಸ್'ಗಾಗಿ 'ಜೇಮ್ಸ್' ಚಿತ್ರ ನಿಲ್ಲಿಸಿ ಎಂದು ಬಲವಂತ ಮಾಡುತ್ತಿರುವುದು ದೌರ್ಜನ್ಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
PublicNext
22/03/2022 08:46 pm