ನವದೆಹಲಿ: ದಿ ಕಾಶ್ಮೀರ್ ಫೈಲ್ಸ್ ಚಿತ್ರವನ್ನು ಯೂಟ್ಯೂಬ್‌ನಲ್ಲಿ ಅಪ್ಲೋಡ್ ಮಾಡಬೇಕೆಂದು ಹೇಳಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧ ಬಿಜೆಪಿ ಮುಖಂಡ ಅಮಿತ್ ಮಾಳವಿಯಾ ಸಿಡಿಮಿಡಿಗೊಂಡಿದ್ದಾರೆ.
ಆ ಸಿನಿಮಾಗೆ ತೆರಿಗೆ ವಿನಾಯಿತಿ ನೀಡುವ ವಿಚಾರದಲ್ಲಿ ಕೇಜ್ರಿವಾಲ್ ಅವರನ್ನು ಬಿಜೆಪಿ ಮುಖಂಡ ಅಮಿತ್ ಮಾಳವಿಯಾ 'ಅರ್ಬನ್ ನಕ್ಸಲ್' ಎಂದು ಟೀಕಿಸಿದ್ದಾರೆ.
ಕಾಶ್ಮೀರ್ ಫೈಲ್ಸ್ ಸಿನಿಮಾ ಬಗ್ಗೆ ಪ್ರಸ್ತಾಪಿಸಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ' ಸುಳ್ಳಿನ ಸಿನಿಮಾಗಳ ಪೋಸ್ಟರ್ ಸಹ ಹಾಕುವುದಿಲ್ಲ. ಆ ಚಿತ್ರದ ನಿರ್ಮಾಣ ಮಾಡಿರುವವರು ಯೂಟ್ಯೂಬ್‌ನಲ್ಲಿ ಅಪ್ಲೋಡ್ ಮಾಡಬಹುದು. ಇದರಿಂದ ಸಿನಿಮಾವನ್ನು ಉಚಿತವಾಗೇ ನೋಡಲು ಸಾಧ್ಯವಾಗುತ್ತದೆ. ಆಗ ಸಿನಿಮಾ ಎಲ್ಲರನ್ನೂ ತಲುಪುತ್ತದೆ ಎಂದು ಕೇಜ್ರಿವಾಲ್ ಗುರುವಾರ ದೆಹಲಿ ವಿಧಾನ ಸಭೆಯಲ್ಲಿ ಹೇಳಿದ್ದರು. ಈ ಕುರಿತಾಗಿ ನಡೆದ ಚರ್ಚೆಯ ವೇಳೆ ಸದನದ ಇತರ ಸದಸ್ಯರು ನಗೆಗಡಲಲ್ಲಿ ತೇಲಿದ್ದರು.
PublicNext
25/03/2022 05:43 pm