ಲಕ್ನೋ: ಉತ್ತರ ಪ್ರದೇಶದಲ್ಲಿ ಅಕ್ಷಯ್ ಕುಮಾರ್ ಅಭಿನಯದ 'ಸಾಮ್ರಾಟ್ ಪೃಥ್ವಿರಾಜ್' ಚಿತ್ರಕ್ಕೆ ತೆರಿಗೆ ಮುಕ್ತಗೊಳಿಸಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘೋಷಣೆ ಮಾಡಿದ್ದಾರೆ.
ಲಕ್ನೋದ ಲೋಕಭವನದಲ್ಲಿ ಇಂದು ಐತಿಹಾಸಿಕ ಆಧಾರಿತ 'ಸಾಮ್ರಾಟ್ ಪೃಥ್ವಿರಾಜ್' ಸಿನಿಮಾದ ವಿಶೇಷ ಪ್ರದರ್ಶವನ್ನು ಏರ್ಪಡಿಸಲಾಗಿತ್ತು. ಸಿಎಂ ಯೋಗಿ ಆದಿತ್ಯನಾಥ್ ಅವರು ಇಂದು ತಮ್ಮ ಸಚಿವ ಸಂಪುಟದ ಸಹೋದ್ಯೋಗಿಗಳೊಂದಿಗೆ ಚಿತ್ರವನ್ನು ವೀಕ್ಷಿಸಿದರು. ಬಳಿಕ ಈ ಚಿತ್ರಕ್ಕೆ ರಾಜ್ಯದಲ್ಲಿ ತೆರಿಗೆ ಮುಕ್ತಗೊಳಿಸುವುದಾಗಿ ಘೋಷಿಸಿದರು.
ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ, ಸಾರಿಗೆ ಸಚಿವ ದಯಾಶಂಕರ್ ಸಿಂಗ್ ಮತ್ತಿತರರು ಸಿನಿಮಾ ವೀಕ್ಷಿಸಿದರು. ಈ ವೇಳೆ ಬಾಲಿವುಡ್ ಸ್ಟಾರ್ ಅಕ್ಷಯ್ ಕುಮಾರ್, ಮಾನುಸಿ ಚಿಲ್ಲರ್ ಮತ್ತು ನಿರ್ದೇಶಕ ಚಂದ್ರ ಪ್ರಕಾಶ್ ದ್ವಿವೇದಿ ಉಪಸ್ಥಿತರಿದ್ದರು.
PublicNext
02/06/2022 07:19 pm