ಬೆಂಗಳೂರು: ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಇನ್ನೇನು ಆರೇಳು ತಿಂಗಳು ಬಾಕಿ ಇದೆ. ಈಗಾಗಲೇ ರಾಜಕೀಯ ಆಸಕ್ತರು ತಮಗೆ ಬೇಕಾದ ಪಕ್ಷ ಸೇರಿಕೊಳ್ಳುತ್ತಿದ್ದಾರೆ. ಜತೆಗೆ ಆಮ್ ಆದ್ಮಿ ಪಕ್ಷಕ್ಕೆ ಸೇರಿಕೊಳ್ಳುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಸದ್ಯ ಹಿರಿಯ ಹಾಸ್ಯ ನಟ ಟೆನ್ನಿಸ್ ಕೃಷ್ಣ ಕೂಡ ಎಎಪಿ ಸೇರ್ಪಡೆಯಾಗಿದ್ದಾರೆ.
ನಗರದ ಖಾಸಗೀ ಹೋಟೆಲ್‌ನಲ್ಲಿ ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಹಾಗೂ ಇನ್ನಿತರ ಹಿರಿಯ ಮುಖಂಡರ ಸಮ್ಮುಖದಲ್ಲಿ ಸೇರ್ಪಡೆ ನಟ ಟೆನಿಸ್ ಕೃಷ್ಣ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಈ ವೇಳೆ ಮಾತನಾಡಿದ ಟೆನಿಸ್ ಕೃಷ್ಣ, ನಾನು ಅಧಿಕಾರಕ್ಕಾಗಿ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿಲ್ಲ. ಎಎಪಿಯಲ್ಲಿ ಭ್ರಷ್ಟಾಚಾರ ಇಲ್ಲ. ಹೀಗಾಗಿ ಜನರ ಸೇವೆ ಮಾಡಲು ನಾನು ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದೇನೆ. ಸರ್ಕಾರಿ ಕಾಲೇಜುಗಳನ್ನು ಮುಚ್ಚುತ್ತಿರುವುದರ ವಿರುದ್ಧ ಹೋರಾಟ ಮಾಡುತ್ತೇನೆ. ಕೋಲಾರದಲ್ಲಿ ನೀರಿನ ಸಮಸ್ಯೆ ಬಗ್ಗೆ ಹೋರಾಟ ಮಾಡುವೆ. ಬಿಜೆಪಿ ಬಲವಂತವಾಗಿ ಹಿಂದಿ ಹೇರಿಕೆ ಮಾಡಲು ಯತ್ನಿಸುತ್ತಿದೆ. ಕರ್ನಾಟಕದಲ್ಲಿ ಕನ್ನಡ ಭಾಷೆಯೇ ಸಾರ್ವಭೌಮ, ಕನ್ನಡ ಉಳಿಯಬೇಕು ಎಂದು ಹೇಳಿದ್ದಾರೆ.
PublicNext
04/08/2022 01:49 pm