ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ನಮ್ಮನ್ನು ಅಗಲಿ 10 ತಿಂಗಳು ಕಳೆದಿದೆ. ಆದ್ರೂ ಅವರ ಪ್ರತಿಯೊಬ್ಬ ಅಭಿಮಾನಿಗಳ ಮನಸ್ಸಿನಲ್ಲಿದ್ದಾರೆ. ಇನ್ನು ಪುನೀತ್ ಅವರ ಬಗ್ಗೆ ವಿಶೇಷ ಕಾಳಜಿ ಹೊಂದಿದ್ದ ಸಿಎಂ ಬಸವರಾಜ ಬೊಮ್ಮಾಯಿ ಕರ್ನಾಟಕ ರತ್ನ ಘೋಷಣೆ ಮಾಡಿದ್ರು. ರಾಜ್ ಕುಟುಂಬದವರ ಜೊತೆಯೂ ಸಿಎಂ ಉತ್ತಮ ಒಡನಾಟ ಹೊಂದಿದ್ದಾರೆ. ಇದೀಗ ಪುನೀತ್ ರಾಜ್ ಕುಮಾರ್ ಕುಟುಂಬಸ್ಥರು ರೇಸ್ ಕೋರ್ಸ್ ನಿವಾಸದಲ್ಲಿರೋ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿದ್ದಾರೆ.
ಕಂಠೀರವ ಸ್ಟುಡಿಯೋದಲ್ಲಿನ ರಾಜ್‌ಕುಮಾರ್, ಪುನೀತ್ ರಾಜ್‌ಕುಮಾರ್ ಮತ್ತು ಪಾರ್ವತಮ್ಮ ಸಮಾಧಿ ಸ್ಥಳವನ್ನು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ರಾಜ್ ಕುಟುಂಬದಿಂದ ಸಿದ್ದಪಡಿಸಿದ ಪಿಪಿಟಿಯನ್ನು ಕೂಡ ಸಿಎಂ ವೀಕ್ಷಣೆ ಮಾಡಿದ್ದಾರೆ. ಪಿಡಬ್ಲ್ಯುಡಿ ಇಲಾಖೆಯಿಂದ ಈ ಯೋಜನೆಗೆ ಅಂದಾಜು ಮೊತ್ತ ತರಿಸಲು ಸಿಎಂ ಸೂಚನೆ ಕೊಟ್ಟಿದ್ದಾರೆ ಎಂದು ತಿಳಿದು ಬಂದಿದೆ. PWD ಇಲಾಖೆಯಿಂದ ಯೋಜನೆಯ ರೂಪುರೇಷ ತಯಾರದ ಬಳಿಕ ಮತ್ತೊಂದು ಸುತ್ತಿನ ಸಭೆ ಮಾಡುವುದಾಗಿ ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.
PublicNext
17/08/2022 05:47 pm