ನವದೆಹಲಿ: ಪವರ್ ಸ್ಟಾರ್ ದಿವಂಗತ ಪುನೀತ್ ರಾಜ್‌ಕುಮಾರ್ ನಟಿಸಿರುವ ಸಾಕ್ಷ್ಯಚಿತ್ರ 'ಗಂಧದ ಗುಡಿ'ಯ ಟ್ರೈಲರ್ ಬಿಡುಗಡೆ ಆಗಿದೆ. ಟ್ರೈಲರ್ ವೀಕ್ಷಿಸಿದ ಪ್ರಧಾನಿ ಮೋದಿ ಮೆಚ್ಚಿಕೊಂಡಿದ್ದಾರೆ.
ಪ್ರಪಂಚದ ಕೋಟ್ಯಾಂತರ ಅಭಿಮಾನಿಗಳ ಹೃದಯದಲ್ಲಿ ಅಪ್ಪು ಅಜರಾಮರವಾಗಿದ್ದಾರೆ. ಪುನೀತ್ ಒಬ್ಬ ತೇಜಸ್ಸಿನ ವ್ಯಕ್ತಿಯಾಗಿದ್ದರು. ಅಪ್ಪು ಅವರಿಗೆ ಅವರೇ ಸಾಟಿ. ಗಂಧದ ಗುಡಿ ಪ್ರಕೃತಿ ಮಾತೆಗೆ ಕರ್ನಾಟಕದ ನೈಸರ್ಗಿಕ ಸೌಂದರ್ಯಕ್ಕೆ ಅರ್ಪಣೆ ಚಿತ್ರತಂಡದ ಪ್ರಯತ್ನಕ್ಕೆ ನನ್ನ ಶುಭಹಾರೈಕೆಗಳು ಎಂದು ಪ್ರಧಾನಿ ಮೋದಿ ಕನ್ನಡದಲ್ಲಿ ಟ್ವೀಟ್ ಮಾಡಿದ್ದಾರೆ.
PublicNext
09/10/2022 02:58 pm