ಬೆಂಗಳೂರು : ರಾಜರಾಜೇಶ್ವರಿನಗರ ಹಾಗೂ ಶಿರಾ ಉಪ ಚುನಾವಣೆಯಲ್ಲಿ ನಾವು ಯಾರೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ.
ಕಾಂಗ್ರೆಸ್ ರಾಷ್ಟ್ರೀಯ ಪಕ್ಷವಾಗಿದ್ದು, ಹೋರಾಟ ಮಾಡಲು ನಮಗೆ ಶಕ್ತಿ ಇದೆ.
ಹೀಗಾಗಿ ನಾವು ಏಕಾಂಗಿಯಾಗಿಯೇ ಹೋರಾಟ ಮಾಡುತ್ತೇವೆ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಬುಧವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಶಿರಾದಲ್ಲಿ ಜೆಡಿಎಸ್ ಶಾಸಕ ಸತ್ಯನಾರಾಯಣ ಅವರ ನಿಧನದಿಂದ ಹಾಗೂ ರಾಜರಾಜೇಶ್ವರಿನಗರದಲ್ಲಿ ಕಾಂಗ್ರೆಸ್ ಶಾಸಕರಾಗಿದ್ದ ಮುನಿರತ್ನ ಬಿಜೆಪಿಗೆ ಹೋಗಿದ್ದರಿಂದ ಚುನಾವಣೆ ಬಂದಿದೆ.
ರಾಜರಾಜೇಶ್ವರಿನಗರ ಕ್ಷೇತ್ರಕ್ಕೆ ಈಗಲೇ ಚುನಾವಣೆ ನಡೆಯುತ್ತದೆ ಎಂದು ನಿರೀಕ್ಷಿಸಿರಲಿಲ್ಲ.
ಹೀಗಾಗಿ ಕ್ಷೇತ್ರಕ್ಕೆ ಅಭ್ಯರ್ಥಿಯ ಯಾರು ಎಂಬುದು ತೀರ್ಮಾನ ಆಗಿಲ್ಲ. ಅಚ್ಚರಿ ಅಭ್ಯರ್ಥಿ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಸ್ಪಷ್ಟಪಡಿಸಿದರು.
PublicNext
01/10/2020 04:23 pm