ಬೆಂಗಳೂರು: ದಾವಣಗೆರೆ ಜಿಲ್ಲೆಯ ಹೊನ್ನಾಳಿ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಆರೋಗ್ಯದಲ್ಲಿ ಏರುಪೇರು ಕಂಡು ಬಂದ ಹಿನ್ನೆಲೆ ಇಂದು ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಕೋವಿಡ್-19 ಪರೀಕ್ಷೆಗೆ ಒಳಗಾಗಿದ್ದೆ. ವರದಿಯಲ್ಲಿ ಸೋಂಕು ತಗುಲಿರುವುದು ದೃಢಪಟ್ಟಿದೆ. ಕಳೆದ ನಾಲ್ಕೈದು ದಿನಗಳಿಂದ ನನ್ನ ಸಂಪರ್ಕದಲ್ಲಿದ್ದ ಎಲ್ಲರೂ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಲು ವಿನಂತಿಸುತ್ತೇನೆ. ನಾನು ಆರೋಗ್ಯವಾಗಿದ್ದೆನೆ ಎಂದು ತಿಳಿಸಿದ್ದಾರೆ.
ಜೊತೆಗೆ ಫೇಸ್‌ಬುಕ್‌ನಲ್ಲಿಯೂ ಈ ವಿಚಾರ ಹಂಚಿಕೊಂಡಿರುವ ಶಾಸಕರು, ಇಂದು ಬೆಳಗ್ಗೆ ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಾಸ ಕಾಣಿಸಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ 10ನೇ ಬಾರಿಗೆ ಕೋವಿಡ್ ಪರೀಕ್ಷೆ ಮಾಡಿಸಿದ್ದು, ವರದಿ ಕೊರೊನಾ ಪಾಸಿಟಿವ್ ಬಂದಿದೆ. ಕಳೆದ ನಾಲ್ಕೈದು ದಿನಗಳಿಂದ ನನ್ನ ಸಂಪರ್ಕದಲ್ಲಿದ್ದ ಎಲ್ಲರೂ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಲು ವಿನಂತಿಸುತ್ತೇನೆ. ಅಃಅ, ಖಈಖಿ, ಐಈಖಿ, ಇಅಉ ಸಿಟಿ ಸ್ಕ್ಯಾನ್, ಡಿ ಡೈಮರ್, Seಡಿum ಈeಡಿಡಿiಛಿiಟಿ ಹಾಗೂ ಅಖP ಈ ಎಲ್ಲಾ ಪರೀಕ್ಷೆಗಳನ್ನು ವೈದ್ಯರು ಮಾಡಿದ್ದು ಯಾವುದೇ ತೊಂದರೆ ಇಲ್ಲ ಎಂದು ತಿಳಿಸಿದ್ದಾರೆ ಹಾಗು ವೈದ್ಯರ ಸಲಹೆಯಂತೆ ಬೆಂಗಳೂರಿನ ನನ್ನ ಸರ್ಕಾರಿ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದೇನೆ ಎಂದಿದ್ದಾರೆ.
ಕಳೆದ ಆರು ತಿಂಗಳುಗಳಿಂದ ಕೋವಿಡ್19ರ ವಿರುದ್ಧ ನಾನು ಸಹ ಒಬ್ಬ ಕೊರೊನಾ ವಾರಿಯರ್ ಆಗಿ ನಿರಂತರ ಜನಸೇವೆ ಮಾಡುತ್ತಿದ್ದು, ನನ್ನ ಮತ ಕ್ಷೇತ್ರದ ಬಂಧುಗಳು ನಿಮ್ಮ ಯಾವುದೇ ಸಮಸ್ಯೆಗಳಿಗೆ ದೂರವಾಣಿ ಮುಖಾಂತರ ನನ್ನನ್ನು ಸಂಪರ್ಕಿಸಬಹುದು. ನಿಮ್ಮೆಲ್ಲರ ಹಾರೈಕೆ ಹಾಗೂ ಆಶೀರ್ವಾದದಿಂದ ನಾನು ಆದಷ್ಟು ಬೇಗ ಗುಣಮುಖನಾಗಿ ಬರುತ್ತೇನೆ, ನನ್ನ ಆರೋಗ್ಯದ ಜೊತೆಗೆ ನಿಮ್ಮೆಲ್ಲರ ಯೋಗಕ್ಷೇಮವು ನನಗೆ ಅಷ್ಟೇ ಮುಖ್ಯವಾಗಿದೆ ಎಂದು ತಿಳಿಸಿದ್ದಾರೆ.
PublicNext
29/09/2020 07:45 pm