ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರೇಪಿಸ್ಟ್ ಗಳಿಗೆ ಪುರುಷತ್ವ ಹರಣ ಶಿಕ್ಷೆ ವಿಧಿಸಿ : ಅನುಪಮಾ ಶೆಣೈ

ಬಳ್ಳಾರಿ: ಸಮಾಜದಲ್ಲಿ ಹೆಣ್ಣುಮಕ್ಕಳು ನಿತ್ಯವು ಬಯದಲ್ಲಿಯೇ ಬದುಕಬೇಕಾಗಿದೆ.

ಸದ್ಯ ಉತ್ತರ ಪ್ರದೇಶದ ಹಾಥರಸ್ ನಲ್ಲಿ ಯುವತಿಯೊಬ್ಬಳ ಮೇಲೆ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮಾಜಿ ಡಿವೈಎಸ್ ಪಿ ಹಾಗೂ ಭಾರತೀಯ ಜನಶಕ್ತಿ ಕಾಂಗ್ರೆಸ್ ಅಧ್ಯಕ್ಷರೂ ಅನುಪಮಾ ಶೆಣೈ ಅತ್ಯಾಚಾರಿಗಳಿಗೆ ಪುರುಷತ್ವ ಹರಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದರು.

ಹಾಥರಸ್ ಪ್ರಕರಣವನ್ನು ರಾಜಕೀಯಗೊಳಿಸದೆ ಸಂತ್ರಸ್ತೆ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಬೇಕು.

ಅತ್ಯಾಚಾರಕ್ಕೊಳಗಾದ ಮಹಿಳೆಯ ಶವವನ್ನು ಕುಟುಂಬಕ್ಕೆ ನೀಡದೆ ಪೊಲೀಸರೇ ಸುಟ್ಟು ಹಾಕಿದ್ದು ತಪ್ಪು, ಸಾಕ್ಷ್ಯನಾಶ ಮಾಡಿದ ಪೊಲೀಸರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು.

ದೇಶದ ನ್ಯಾಯ ವ್ಯವಸ್ಥೆಯು ನಿರಪರಾಧಿಗಳಿಗೆ ಶಿಕ್ಷೆ ಆಗಬಾರದು ಎಂಬ ಉದ್ದೇಶ ಹೊಂದಿದೆ.

ಇದರಿಂದಾಗಿಯೇ ಅಪರಾಧಿಗಳ ಸಂಖ್ಯೆ ಹೆಚ್ಚಿದೆ ಎಂದರು.

ಹಾಥರಸ್ ಪ್ರಕರಣದಲ್ಲಿ ಬಿಜೆಪಿ ಹಸ್ತಕ್ಷೇಪ ಮಾಡದೆ ನ್ಯಾಯಯುತ ತನಿಖೆಗೆ ಅವಕಾಶ ನೀಡಬೇಕೆಂದು ಅನುಪಮಾ ಒತ್ತಾಯಿಸಿದರು.

ಬಸವಕಲ್ಯಾಣದ ಉಪ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಯೋಚನೆ ಇದೆ ಎಂದು ಅನುಪಮಾ ಶೆಣೈ ತಿಳಿಸಿದರು.

Edited By : Nirmala Aralikatti
PublicNext

PublicNext

09/10/2020 02:32 pm

Cinque Terre

85.89 K

Cinque Terre

9

ಸಂಬಂಧಿತ ಸುದ್ದಿ