ಕಲಬುರಗಿ: ಐಪಿಎಲ್ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿ, ಬಿಜೆಪಿ ಶಾಸಕರೊಬ್ಬರ ಪತ್ನಿಯ ಕಾರು ಸೀಜ್ ಮಾಡಿದ ಘಟನೆ ಕಲಬುರಗಿಯಲ್ಲಿ ನಡೆದಿದೆ.
ಮಹಾರಾಷ್ಟ್ರದ ಸೋಲಾಪುರ ಸಿಸಿಬಿ ಪೊಲೀಸರು ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡದೆ ದಿಢೀರ್ ದಾಳಿ ನಡೆಸಿ 38.44 ಲಕ್ಷ ರೂ. ನಗದು, ಎರಡು ಕಾರು, ಲ್ಯಾಪ್‌ಟಾಪ್, ಮೊಬೈಲ್ ಮತ್ತಿತರ ವಸ್ತು ವಶಕ್ಕೆ ಪಡೆದಿದ್ದಾರೆ. ಐಪಿಎಲ್ 13ನೇ ಫೈನಲ್ ಪಂದ್ಯದ ವೇಳೆ ಕಲಬುರಗಿ ನಗರದಲ್ಲಿ ಬೆಟ್ಟಿಂಗ್ ನಡೆಸಿದ ಬಗ್ಗೆ ಖಚಿತ ಮಾಹಿತಿ ಸಿಕ್ಕಿತ್ತು.
ತಕ್ಷಣವೇ ಸೋಲಾಪುರ ಸಿಸಿಬಿ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಇದೆಲ್ಲಕ್ಕಿಂತಲೂ ಮುಖ್ಯವಾಗಿ ಕಲಬುರಗಿ ಗ್ರಾಮೀಣ ಕ್ಷೇತ್ರದ ಶಾಸಕ ಬಸವರಾಜ ಮತ್ತಿಮೋಡ ಪತ್ನಿ ಜಯಶ್ರೀ ಮತ್ತಿಮೋಡ ಹೆಸರಿನಲ್ಲಿದ್ದ ಕಾರನ್ನು ಸೋಲಾಪುರ ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
PublicNext
13/11/2020 03:43 pm