ಡೆರ್ಹಾಡೂನ್: ರಸ್ತೆ ಅಪಘಾತದಲ್ಲಿ ಗಾಯಗೊಂಡವರ ನೆರವಿಗೆ ನಿಂತರೆ ಕೋರ್ಟ್, ಕಚೇರಿ, ಪೊಲೀಸ್ ಠಾಣೆಗೆ ಅಲೆದಾಟ ಫಿಕ್ಸ್ ಅಂತ ಅನೇಕರು ಹೆದರುತ್ತಾರೆ. ಹೀಗಾಗಿ ಅನೇಕರು ರಸ್ತೆ ಅಪಘಾತಕ್ಕೆ ಒಳಗಾಗಿ ಸಕಾಲದಲ್ಲಿ ಚಿಕಿತ್ಸೆ ದೊರೆಯದೆ ಪ್ರಾಣ ಕಳೆದುಕೊಂಡ ಘಟನೆಗಳು ನಡೆದಿವೆ. ಇಂತಹ ಘಟನೆಗಳನ್ನು ತಡೆಯಲು ಉತ್ತರಾಖಂಡ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ.
ಹೌದು. ರಸ್ತೆ ಅಪಘಾತದಲ್ಲಿ ಗಾಯಗೊಂಡವರ ನೆರವಿಗೆ ನಿಂತವರಿಗೆ 1 ಲಕ್ಷ ರೂ. ಬಹುಮಾನ ನೀಡಲು ಉತ್ತರಾಖಂಡ ಸರ್ಕಾರ ಮುಂದಾಗಿದೆ. ಈ ಸಂಬಂಧ ಪ್ರಸ್ತಾವನೆಗೆ ಉತ್ತರಾಖಂಡ ಸರ್ಕಾರ ಸೋಮವಾರ ತಾತ್ವಿಕವಾಗಿ ಅನುಮೋದನೆ ನೀಡಿದೆ. ರಸ್ತೆ ಸುರಕ್ಷತಾ ನಿಧಿಯಿಂದ ಅಂತಹ ಸಂದರ್ಭಗಳಲ್ಲಿ ಬಹುಮಾನ ನೀಡುವ ಅಧಿಕಾರವನ್ನು ಡಿಜಿಪಿಗೆ ನೀಡಲಾಗಿದೆ. ಇದು ಅಪಘಾತ ಸಂತ್ರಸ್ತರಿಗೆ ಸಹಾಯ ಮಾಡಲು ಜನರನ್ನು ಪ್ರೇರೇಪಿಸುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
PublicNext
15/12/2020 03:45 pm