ಪಿರಿಯಾಪಟ್ಟಣ (ಮೈಸೂರು): ಗ್ರಾಮ ಪಂಚಾಯಿತಿ ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ಎಣ್ಣಗೆ ಭಾರೀ ಡಿಮ್ಯಾಂಡ್ ಬಂದಿದೆ.
ಮತಯಾಚನೆಗೂ ಮುನ್ನ ಮದ್ಯ ಸಪ್ಲಾಯ್ ಮಾಡಲು ಅಕ್ರಮ ಮದ್ಯ ಸಾಗಾಟವಾಗುತ್ತಿದೆ.
ದ್ವಿಚಕ್ರ ವಾಹನದಲ್ಲಿ ಅಕ್ರಮ ಮದ್ಯ ಸಾಗಾಟ ಮಾಡುವರ ಮೇಲೆ ಅಬಕಾರಿ ಇಲಾಖೆ ದಾಳಿ ನಡೆಸಿ 5 ಘೋರ ಮತ್ತು 13 ಸಾಮಾನ್ಯ ಪ್ರಕರಣಗಳು ಸೇರಿ 18 ಪ್ರಕರಣಗಳನ್ನು ದಾಖಲಿಸಿದೆ.
ಡಿ.15ರಂದು 7.560 ಲೀ. ಮದ್ಯ ಹಾಗೂ ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ.
ಡಿ.16ರಂದು 13.5 ಲೀ. ಮದ್ಯ ಹಾಗೂ ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡು ಆರೋಪಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಹೀಗೆ 21 ಲೀಟರ್ ಮದ್ಯವನ್ನು 2 ದಿನಗಳಲ್ಲಿ ವಶಪಡಿಸಿಕೊಂಡಿದ್ದಾರೆ.
ಚುನಾವಣೆ ಮಾದರಿ ನೀತಿ ಸಂಹಿತೆ ಜಾರಿಯಾದಾಗಿನಿಂದ ಇಲ್ಲಿಯವರಿಗೆ 18 ಪ್ರಕರಣಗಳನ್ನು ದಾಖಲಿಸಿದ್ದು, 4 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.
ಚುನಾವಣೆ ಹಿನ್ನೆಲೆಯಲ್ಲಿ ಶೇ.5ರಷ್ಟು ಮದ್ಯ ಮಾರಾಟ ಹೆಚ್ಚಾಗಿದೆ.
PublicNext
17/12/2020 12:28 pm