ಶಿವಮೊಗ್ಗ: ಶಿವಮೊಗ್ಗದಲ್ಲಿ ನಡೆದ ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಹಿಂದೂ ಸಂಘಟನೆ ಕಾರ್ಯಕರ್ತರು ಹರ್ಷನ ಸಾವಿಗೆ ನ್ಯಾಯಕ್ಕಾಗಿ ಪ್ರತಿಭಟನೆ ನಡೆಸಿದ್ದಾರೆ. ಪರಿಣಾಮ ಶಿವಮೊಗ್ಗ ಜಿಲ್ಲೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.
ಇದೀಗ ಈ ಘಟನೆ ಕುರಿತು ಇದೀಗ ಜನಪ್ರಿಯ ನಟಿ, ಬಿಜೆಪಿ ನಾಯಕಿ ಖುಷ್ಬೂ ಸುಂದರ್ ಕೂಡ ಧ್ವನಿ ಎತ್ತಿದ್ದಾರೆ. ಅಲ್ಲದೇ ಪ್ರಕರಣ ಸಂಬಂಧ ನ್ಯಾಯಕ್ಕೆ ಆಗ್ರಹಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು. ನೀವು ಕೊಲೆ ಮಾಡಿ ಅದರಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಯಾವುದೇ ಧರ್ಮ ಅಥವಾ ರಾಜಕೀಯ ನಮ್ಮ ಏಕತೆಯನ್ನು ವಿಭಜಿಸಲು ಸಾಧ್ಯವಿಲ್ಲ. ನ್ಯಾಯ ಸಿಗುವವರೆಗೆ ಹಕ್ಕಿಗಾಗಿ ಹೋರಾಡೋಣ. ನಾವು ಒಟ್ಟಿಗೆ ನಿಲ್ಲುತ್ತೇವೆ, ಒಟ್ಟಿಗೆ ಇರುತ್ತೇವೆ. ಈಗಲೂ ಎಂದೆಂದಿಗೂ ಎಂದು ಟ್ವೀಟ್ ಮಾಡಿದ್ದಾರೆ.
PublicNext
21/02/2022 10:11 pm