ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಲಖಿಂಪುರ ಹಿಂಸಾಚಾರದಲ್ಲಿ ಮೃತರಾದ ರೈತ ಕುಟುಂಬಕ್ಕೆ ತಲಾ 45 ಲಕ್ಷ ರೂ. ಪರಿಹಾರ

ಲಕ್ನೋ: ಉತ್ತರ ಪ್ರದೇಶದ ಲಖಿಂಪುರ ಖೇರಿ ಹಿಂಸಾಚಾರದಲ್ಲಿ ಮೃತಪಟ್ಟ ನಾಲ್ವರು ರೈತರ ಕುಟುಂಬಕ್ಕೆ ತಲಾ 45 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಉತ್ತರಪ್ರದೇಶ ಸರ್ಕಾರ ಘೋಷಿಸಿದೆ.

ಉತ್ತರ ಪ್ರದೇಶ ಸರ್ಕಾರ ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸುತ್ತಿದೆ. ಇನ್ನು ಹಿಂಸಾಚಾರದಲ್ಲಿ ಗಾಯಗೊಂಡವರಿಗೆ ತಲಾ 10 ಲಕ್ಷ ರೂಪಾಯಿ ನೀಡುವುದಾಗಿಯೂ ಹೇಳಿದೆ. ಒಟ್ಟಾರೆ ಘಟನೆಯನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಲಾಗುವುದು. ಹಾಗೂ ಮೃತರ ಕುಟುಂಬದಲ್ಲಿ ಒಬ್ಬರಿಗೆ ಸರ್ಕಾರಿ ಹುದ್ದೆ ನೀಡಲಾಗುವುದು ಎಂದು ಉತ್ತರ ಪ್ರದೇಶ ಸರ್ಕಾರ ಭರವಸೆ ನೀಡಿದೆ.

Edited By : Nagaraj Tulugeri
PublicNext

PublicNext

04/10/2021 08:12 pm

Cinque Terre

149.35 K

Cinque Terre

1

ಸಂಬಂಧಿತ ಸುದ್ದಿ