ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಬಿಡಿಎ ಅಧ್ಯಕ್ಷರ ಪಿಎಗೆ 3 ಲಕ್ಷ ರೂ. ವೇತನ.?

ಬೆಂಗಳೂರು: ನಿಯಮಗಳನ್ನು ಗಾಳಿಗೆ ತೂರಿ ಬಿಡಿಎ ಅಧ್ಯಕ್ಷರ ಆಪ್ತ ಸಹಾಯಕ ಹುದ್ದೆಗೆ ನೇಮಕಾತಿ ಮಾಡಿದ್ದಲ್ಲದೇ ಮೂರು ಲಕ್ಷ ರೂಪಾಯಿಗೂ ಅಧಿಕ ವೇತನ ನೀಡುತ್ತಿರುವ ಆರೋಪ ಕೇಳಿ ಬಂದಿದೆ.

ಹೌದು. ಕೆಎಎಸ್ ಜೂನಿಯರ್‌ ಸ್ಕೇಲ್‌ ಹುದ್ದೆಗೆ ಕೆಎಎಸ್ ಅಲ್ಲದವರನ್ನು ನೇಮಿಸಲಾಗಿದೆ. ಈ ಹುದ್ದೆಗೆ ತಿಂಗಳಿಗೆ 50 ಸಾವಿರದಿಂದ 60 ಸಾವಿರ ರೂಪಾಯಿ ವೇತನವಿದ್ದರೂ ಬರೋಬ್ಬರಿ 3,12,002 ರೂಪಾಯಿ ಸಂಬಳವನ್ನು ಸೋಮಶೇಖರ್‌ರವರಿಗೆ ನೀಡಲಾಗುತ್ತಿದೆ. ಬಿಡಿಎ ಕಮಿಷನರ್‌ ಹಾಗೂ ಆಯುಕ್ತರಿಗೇ ಇಷ್ಟು ಸಂಬಳವಿಲ್ಲ.

ಬಿಜೆಪಿ ಶಾಸಕರೂ ಆಗಿರುವ ಬಿಡಿಎ ಅಧ್ಯಕ್ಷ ಎಸ್‌.ಆರ್.ವಿಶ್ವನಾಥ್‌, ಬಿಡಿಎ ಆಯುಕ್ತರು ಹಾಗೂ ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ನಿರ್ದೇಶನದಂತೆ ಸೋಮಶೇಖರ್‌ ನೇಮಕವಾಗಿದೆ. ಸಿಎಂ ಬಸವರಾಜ್‌ ಬೊಮ್ಮಾಯಿ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ಅಡಿಯಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿ ಹಾಗೂ ಆಡಳಿತ ಸುಧಾರಣೆ ಇಲಾಖೆ (ಡಿಪಿಎಆರ್) ಕಾನೂನುಬಾಹಿರ ನೇಮಕಾತಿಗೆ ಅನುಮೋದನೆ ನೀಡಿದೆ. ಹಲವು ವರ್ಷಗಳಿಂದ ನಷ್ಟದಲ್ಲಿರುವ ಬಿಡಿಎಯು ಆಪ್ತ ಸಹಾಯಕ ಹುದ್ದೆಗೆ ದುಬಾರಿ ವೇತನ ನೀಡುತ್ತಿರುವುದರ ಹಿಂದಿನ ಉದ್ದೇಶವೇನು..?

ಈ ಬಗ್ಗೆ ಪ್ರೆಸ್‌ಕ್ಲಬ್‌ನಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಕೆಎಎಸ್ ಅಧಿಕಾರಿ ಕೆ.ಮಥಾಯಿ, ಬಿಡಿಎ ಹಾಗೂ ಕರ್ನಾಟಕ ಸರ್ಕಾರದ ನಿಯಮಾವಳಿಯನ್ನು ಉಲಂಘಿಸಿ ಸೋಮಶೇಖರ್‌ ಎಂಬುವವರನ್ನು ಎಸ್‌.ಆರ್.ವಿಶ್ವನಾಥ್‌ರವರ ಆಪ್ತ ಸಹಾಯಕ ಹುದ್ದೆಗೆ ನೇಮಕ ಮಾಡಲಾಗಿದೆ‌ ಎಂದು ಆರೋಪಿ ಸಿದರು.

"ಶೀಘ್ರವೇ ಸೋಮಶೇಖರ್‌ರವರನ್ನು ಅಮಾನತು ಮಾಡಿ, ಆ ಸ್ಥಾನಕ್ಕೆ ಸೂಕ್ತ ವ್ಯಕ್ತಿಯನ್ನು ನೇಮಕ ಮಾಡಬೇಕು. ನಿಯಮಾವಳಿ ಅನ್ವಯ ವೇತನ ನೀಡಬೇಕು. ದುಬಾರಿ ವೇತನ ನೀಡಿದ್ದರಿಂದ ಈವರೆಗೆ ಬಿಡಿಎಗೆ ಆದ ನಷ್ಟವನ್ನು ಸಂಬಂಧಪಟ್ಟ ಎಲ್ಲ ಅಧಿಕಾರಿಗಳ ಸಂಬಳದಿಂದ ಭರಿಸಿಕೊಳ್ಳಬೇಕು. ಇಲ್ಲದಿದ್ದರೆ ವಿಧಾನಸೌಧದ ಎದುರು ಆಮ್‌ ಆದ್ಮಿ ಪಾರ್ಟಿಯು ಧರಣಿ ನಡೆಸಲಿದೆ" ಎಂದು ಕೆ.ಮಥಾಯಿ ಎಚ್ಚರಿಕೆ ನೀಡಿದರು.

Edited By : Somashekar
PublicNext

PublicNext

17/05/2022 08:18 pm

Cinque Terre

79.32 K

Cinque Terre

2

ಸಂಬಂಧಿತ ಸುದ್ದಿ