ನವದೆಹಲಿ: ಜೂನ್ 2 ರಂದು ವಿಚಾರಣೆಗೆ ಹಾಜರಾಗುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ನೋಟಿಸ್ ನೀಡಿದ್ದರು. ಆದರೆ ಕೆಲ ಸಮಯಾವಕಾಶ ನೀಡುವಂತೆ ರಾಹುಲ್ ಗಾಂಧಿ ಕೋರಿದ್ದರು. ಹೀಗಾಗಿ ಜೂನ್ 13ರಂದು ವಿಚಾರಣೆಎಗ ಹಾಜರಾಗುವಂತೆ ಮತ್ತೊಂದು ನೋಟಿಸ್ ನೀಡಲಾಗಿದೆ.
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಸಂಸದ ರಾಹುಲ್ ಗಾಂಧಿ ಅವರಿಗೆ ಇಡಿ ನೋಟಿಸ್ ನೀಡಿದ್ದು, ಏಜೆನ್ಸಿಯ ಮುಂದೆ ಹಾಜರಾಗುವಂತೆ ಸೂಚಿಸಿದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್‌ಎ) ಅಡಿಯಲ್ಲಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಯನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಪ್ರಶ್ನಿಸಲಿದ್ದಾರೆ.
PublicNext
03/06/2022 02:03 pm