ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರೇಕಿಂಗ್ : ಸಿಬಿಐ ಅಧಿಕಾರಿಗಳಿಂದ ಮಾಜಿ ಸಚಿವ ವಿನಯ್ ಕುಲಕರ್ಣಿ ಬಂಧನ

ಧಾರವಾಡ: ಕಾಂಗ್ರೆಸ್ ಮಾಜಿ ಸಚಿವ ವಿನಯ ಕುಲಕರ್ಣಿ ಅವರನ್ನು ಸಿಬಿಐ ಅಧಿಕಾರಿಗಳು ಇಂದು ಬೆಳ್ಳಂಬೆಳಿಗ್ಗೆ ಬಂಧನ ಮಾಡಿದ್ದಾರೆ.

ಜಿ.ಪಂ. ಸದಸ್ಯ ಯೋಗೇಶ್‌ಗೌಡ ಕೊಲೆ ಪ್ರಕರಣ ಸಂಬಂಧ ಸಿಬಿಐ ಮಾಜಿ ಸಚಿವ ವಿನಯ್ ಕುಲಕರ್ಣಿ ವಶಕ್ಕೆ ಪಡೆದಿದ್ದಾರೆ.

ಇಂದು ಬೆಳಗ್ಗೆ ವಿನಯ್ ಕುಲಕರ್ಣಿ ನಿವಾಸಕ್ಕೆ ಭೇಟಿ ನೀಡಿದ ಸಿಬಿಐ ಅಧಿಕಾರಿಗಳು ವಿನಯ್ ಕುಲಕರ್ಣಿ ಅವರನ್ನು ವಶಕ್ಕೆ ಪಡೆದು ಧಾರವಾಡ ಉಪನಗರ ಠಾಣೆಗೆ ಕರೆದೊಯ್ದಿದ್ದಾರೆ.

2016ರಲ್ಲಿ ಧಾರವಾಡದ ಸಪ್ತಾಪುರದಲ್ಲಿ ಯೋಗೇಶ್​ ಗೌಡ ಮಾಲೀಕತ್ವದ ಜಿಮ್​ ಬಳಿ ಯೋಗೇಶ್ ಗೌಡ ಹತ್ಯೆ ನಡೆದಿತ್ತು.

ಸೆಪ್ಟೆಂಬರ್ 2019ರಲ್ಲಿ ಸಿಬಿಐ ಹತ್ಯೆ ಪ್ರಕರಣದ ವಿಚಾರಣೆ ಆರಂಭಿಸಿತ್ತು. ಈಗ ಈ ಸಂಬಂಧ ವಿನಯ್ ಕುಲಕರ್ಣಿ ಅವರನ್ನು ವಶಕ್ಕೆ ಪಡೆಯಲಾಗಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Edited By : Nirmala Aralikatti
PublicNext

PublicNext

05/11/2020 07:46 am

Cinque Terre

156.81 K

Cinque Terre

1