ಬೆಂಗಳೂರು: ನವದೆಹಲಿಯಿಂದ ಸುಮಾರು 45 ಜನ ಆದಾಯ ತೆರಿಗೆ ಹಾಗೂ ಇ.ಡಿ ಅಧಿಕಾರಿಗಳು ರಾಜ್ಯಕ್ಕೆ ಬಂದು ಬೀಡು ಬಿಟ್ಟಿದ್ದಾರೆ. ಇಂದು ಬೆಳ್ಳಂಬೆಳಿಗ್ಗೆ 6 ಗಂಟೆಗೆ ಬಂದಿರುವ ಅಧಿಕಾರಿಗಳು ಶಾಸಕ ಜಮೀರ್ ಅಹ್ಮದ್ ಮನೆ ಹಾಗೂ ಕಚೇರಿ ಮೇಲೆ ದಾಳಿ ಮಾಡಿದ್ದಾರೆ.
ಇನ್ನೊಂದೆಡೆ ಮಾಜಿ ಸಚಿವ ರೋಷನ್ ಬೇಗ್ ಅವರ ಮನೆಗೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ಮಾಡಿದ್ದಾರೆ. ವಿದೇಶದಲ್ಲಿ ಆರ್ಥಿಕ ವ್ಯವಹ್ಱರ ನಡೆಯುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ. ರೋಷನ್ ಮನೆಯಲ್ಲಿರುವ ಇ.ಡಿ ಅಧಿಕಾರಿಗಳು ದಾಖಲೆ ಪರಿಶೀಲಿಸುತ್ತಿದ್ದಾರೆ.
PublicNext
05/08/2021 10:01 am