ತುಮಕೂರು: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರ ತಿಪಟೂರಿನ ಮನೆಗೆ ಕಾಂಗ್ರೆಸ್‌ನ ಎನ್‌ಎಸ್‌ಯುಐ ಕಾರ್ಯಕರ್ತರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದರು. ಅಲ್ಲದೇ ಆರ್‌ಎಸ್‌ಎಸ್ ಚಡ್ಡಿ ಸುಟ್ಟು ಹಾಕಿದ್ದರು. ಈ ಸಂಬಂಧ ಬಂಧಿಸಲ್ಪಟ್ಟು ಜೈಲು ಸೇರಿದ್ದಂತ ಎನ್ಎಸ್‌ಯುಐ ಅಧ್ಯಕ್ಷ ಸೇರಿದಂತೆ 24 ಜನರಿಗೆ ಜಾಮೀನು ನೀಡಲಾಗಿದೆ.
ಜೂನ್.1, 2022ರಂದು ತುಮಕೂರು ಜಿಲ್ಲೆಯ ತಿಪಟೂರಿನಲ್ಲಿರುವಂತ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಮನೆಗೆ ಏಕಾಏಕಿ ಎನ್‌ಎಸ್‌ಯುಐ ಕಾರ್ಯಕರ್ತರು ನುಗ್ಗಿ ಪ್ರತಿಭಟನೆ ನಡೆಸಿದ್ದರು. ಪಠ್ಯಪುಸ್ತಕ ಪರಿಷ್ಕರಣೆ ವಿವಾದದ ಬಗ್ಗೆ ಕಿಡಿಕಾರಿದ್ದರು. ಅಲ್ಲದೇ ಆರ್‌ಎಸ್‌ಎಸ್ ಚಡ್ಡಿಯನ್ನು ಸುಟ್ಟು ಹಾಕಿದ್ದರು. ಈ ಪ್ರತಿಭಟನೆ ಬಳಿಕ, ಎನ್‌ಎಸ್‌ಯುಐ ಅಧ್ಯಕ್ಷ ಕೀರ್ತಿ ಗಣೇಶ್ ಸೇರಿದಂತೆ 24 ಮಂದಿಯ ವಿರುದ್ಧ ಎಫ್ಐ ಆರ್ ದಾಖಲಿಸಲಾಗಿತ್ತು. ಬಂಧಿಸಿ ತುಮಕೂರು ಜೈಲಿಗೆ ಶಿಫ್ಟ್ ಮಾಡಲಾಗಿತ್ತು.
PublicNext
08/06/2022 07:49 pm