ಕೋಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ನಡೆಯನ್ನು ಖಂಡಿಸಿ ಇಂದು ಕೋಲ್ಕತ್ತಾದಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ಹಮ್ಮಿಕೊಂಡಿದ್ದರು.
ಪ್ರತಿಭಟನೆ ವೇಳೆ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಅವರನ್ನು ಪೊಲೀಸರು ತಡೆಯಲು ಮುಂದಾಗಿದ್ದಾರೆ. ಇದೇ ವೇಳೆ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಮಾಧ್ಯಮಕ್ಕೆ ಹೇಳಿಕೆ ನೀಡುತ್ತಿದ್ದ ಸುವೇಂದು ಅಧಿಕಾರಿ ಅವರನ್ನು ವಶಕ್ಕೆ ಪಡೆಯಲು ಮುಂದಾಗಿದ್ದಾರೆ. ಆಗ ಕೆಂಡಾಮಂಡಲರಾದ ಸೌವೆಂದು ಅವರು ಮಹಿಳಾ ಪೊಲೀಸ್ ಅಧಿಕಾರಿ ಮೇಲೆ ಗರಂ ಆಗಿದ್ದಾರೆ. 'ನಾನು ಗಂಡಸು, ನೀನು ಲೇಡಿ. ಮುಟ್ಟಬೇಡ ನನ್ನ ಬಾಡಿ' ಎಂದು ಗುಡುಗಿದ್ದಾರೆ.
ಈ ವಿಡಿಯೋ ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ.
PublicNext
13/09/2022 06:38 pm