ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶ್ರೀಶೈಲದಲ್ಲಿ ಕನ್ನಡಿಗರಿಗೆ ರಕ್ಷಣೆ ನೀಡುವಂತೆ ಆಂಧ್ರ ಸಿಎಂಗೆ ಬೊಮ್ಮಾಯಿ ಮನವಿ

ಬೆಂಗಳೂರು: ಆಂಧ್ರಪ್ರದೇಶದ ಶ್ರೀಶೈಲದಲ್ಲಿ ಕನ್ನಡಿಗ ಭಕ್ತರ ಮೇಲೆ ಹಲ್ಲೆ ನಡೆದಿದ್ದು, ಬೇರೆ ರಾಜ್ಯಗಳಿಂದ ಜಾತ್ರೆಗಳಿಗೆ ಭೇಟಿ ನೀಡಿವವರು ಹೆಚ್ಚಿರುತ್ತಾರೆ. ಅಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಬೇಕು. ಹೊರಗಿನಿಂದ ಬರುವ ಭಕ್ತರಿಗೆ ರಕ್ಷಣೆ ನೀಡಬೇಕು ಎಂದು ಆಂಧ್ರಪ್ರದೇಶದ ಮುಖ್ಯ ಮಂತ್ರಿಗಳಿಗೆ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾದಿದ್ದಾರೆ.

ವಿಧಾನಸೌಧದಲ್ಲಿ ಇಂದು ಮಾಧ್ಯಮದವರೊಂದಿಗೆ ಆಂಧ್ರಪ್ರದೇಶದ ಜಾತ್ರೆಯಲ್ಲಿ ನಡೆದ ಹಿಂಸಾಚಾರ ಕುರಿತು ಮಾತನಾಡಿದ ಅವರು, ಮಹಾರಾಷ್ಟ್ರ, ಕರ್ನಾಟಕ ಮತ್ತು ಆಂಧ್ರಪ್ರದೇಶದಿಂದಲೂ ದೊಡ್ಡ ಪ್ರಮಾಣದಲ್ಲಿ ಭಕ್ತಾದಿಗಳು ಭೇಟಿ ನೀಡುತ್ತಾರೆ. ಹಿಂದಿರುಗುವ ಸಂದರ್ಭದಲ್ಲಿ ಕೆಲವು ಭಕ್ತರ ನಡುವೆ ಜಗಳ ಉಂಟಾಗಿ ಇರಿತವೂ ನಡೆದಿದೆ. ಈ ಹಿನ್ನೆಲೆಯಲ್ಲಿ ಸ್ಥಳೀಯರು ಮತ್ತು ಹೊರಗಿನಿಂದ ಬಂದಿದ್ದ ಭಕ್ತರ ನಡುವೆ ಜಗಳ ಉಂಟಾಗಿದೆ. ಆಂಧ್ರಪ್ರದೇಶದ ಅಧಿಕಾರಿಗಳೊಂದಿಗೆ ರಾತ್ರಿಯಿಂದಲೇ ಸಂಪರ್ಕ ದಲ್ಲಿದ್ದೇನೆ. ಪರಿಸ್ಥಿತಿ ಈಗ ನಿಯಂತ್ರಣದಲ್ಲಿದೆ. ಇಬ್ಬರಿಗೆ ತೀವ್ರವಾಗಿ ಗಾಯವಾಗಿ, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈಗ ಚೇತರಿಸಿಕೊಳ್ಳುತ್ತಿದ್ದಾರೆ. ಸದ್ಯಕ್ಕೆ ಆಂಧ್ರಪ್ರದೇಶದ ಮುಖ್ಯ ಮಂತ್ರಿಗಳೊಂದಿಗೆ ಮಾತನಾಡಲು ಪ್ರಯತ್ನ ನಡೆದಿದೆ ಎಂದರು.

Edited By : Nagaraj Tulugeri
PublicNext

PublicNext

31/03/2022 05:24 pm

Cinque Terre

76.44 K

Cinque Terre

3

ಸಂಬಂಧಿತ ಸುದ್ದಿ