ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್‌ಮುಖ್ ಬಂಧನ

ಮುಂಬೈ: ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್‌ಮುಖ್ ಅವರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ‌.

ಇದಕ್ಕೂ ಮುನ್ನ ನಿರೀಕ್ಷಣಾ ಜಾಮೀನು ಕೋರಿ ಅನಿಲ್ ದೇಶ್‌ಮುಖ್ ಬಾಂಬೆ ಹೈಕೋರ್ಟ್ ಮೊರೆ ಹೋಗಿದ್ದರು‌. ಆದರೆ ವಿಚಾರಣೆ ನಡೆಸಿರುವ ಕೋರ್ಟ್ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ಭ್ರಷ್ಟಾಚಾರದ‌ ಪ್ರತ್ಯೇಕ ಪ್ರಕರಣದ ಅಡಿ ಅವರನ್ನು ವಶಕ್ಕೆ ಪಡೆಯಲು ಮುಂಬೈ ನ್ಯಾಯಾಲಯ ಸಿಬಿಐ ಅಧಿಕಾರಿಗಳಿಗೆ ಅವಕಾಶ ನೀಡಿತ್ತು‌‌.

ಮುಂಬೈ ಮಹಾನಗರ ಪೊಲೀಸ್ ಆಯುಕ್ತ ಪರಮ್‌ವೀರ್ ಸಿಂಗ್ ಅವರು ಆಗಿನ ಗೃಹ ಸಚಿವರಾಗಿದ್ದ ದೇಶ್‌ಮುಖ್ ವಿರುದ್ಧ ಪತ್ರಿಕಾಗೋಷ್ಟಿ ನಡೆಸಿ ಭ್ರಷ್ಟಾಚಾರದ ಗಂಭೀರ ಆರೋಪ ಮಾಡಿದ್ದರು‌. ಆ ನಂತರ ದೇಶ್‌ಮುಖ್ ಅವರನ್ನು ಗೃಹ ಸಚಿವ ಸ್ಥಾನದಿಂದ ಕೆಳಗಿಳಿಸಲಾಗಿತ್ತು‌. ಸದ್ಯ ಅವರು ಸಿಬಿಐ ಸುಳಿಯಲ್ಲಿ ಸಿಲುಕಿದ್ದಾರೆ.

Edited By : Nagaraj Tulugeri
PublicNext

PublicNext

06/04/2022 03:22 pm

Cinque Terre

76.98 K

Cinque Terre

7

ಸಂಬಂಧಿತ ಸುದ್ದಿ