ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಚಿವ ನಾಗೇಶ್ ಮನೆ ಮುಂದೆ ದಾಂಧಲೆ: ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇವೆಂದ ಸಿಎಂ

ಬೆಂಗಳೂರು: ಪ್ರಾಥಮಿಕ ಹಾಗು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರ ನಿವಾಸಕ್ಕೆ ನುಗ್ಗಿ ದಾಂಧಲೆ ನಡೆಸಿರುವ ಘಟನೆ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ದುಷ್ಕರ್ಮಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಸಿಎಂ ಬೊಮ್ಮಾಯಿ, ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರ ತಿಪಟೂರಿನ ಮನೆಯ ಆವರಣಕ್ಕೆ ನುಗ್ಗಿ ಎನ್ಎಸ್‌ಯುಐ ಕಾರ್ಯಕರ್ತರು ಪ್ರತಿಭಟನೆ ಮಾಡಿ ದಾಂಧಲೆ ನಡೆಸಿರುವುದು ಖಂಡನೀಯ. ಇಂತಹ ನಡೆ ವಿದ್ಯಾರ್ಥಿಗಳಿಗೆ, ಶಿಕ್ಷಣ ಪ್ರೇಮಿಗಳಿಗೆ ಶೋಭೆ ತರುವುದಿಲ್ಲ. ಈ ಕುಕೃತ್ಯ ನಡೆಸಿರುವ ದುಷ್ಕರ್ಮಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಪ್ರಾಥಮಿಕ ಹಾಗು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರ ನಿವಾಸಕ್ಕೆ ನುಗ್ಗಿ ದಾಂಧಲೆ ನಡೆಸಿರುವ ಘಟನೆ ತುಮಕೂರು ಜಿಲ್ಲೆ ತಿಪಟೂರಿನಲ್ಲಿರುವ ಅವರ ನಿವಾಸದಲ್ಲಿ ನಡೆದಿದೆ. ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರ ತಿಪಟೂರಿನ ಮನೆಯ ಆವರಣಕ್ಕೆ ನುಗ್ಗಿ ಎನ್ಎಸ್‌ಯುಐ ಕಾರ್ಯಕರ್ತರು ಪ್ರತಿಭಟನೆ ಮಾಡಿ ದಾಂಧಲೆ ನಡೆಸಿದ್ದು ಈ ಸಂಬಂಧ 15 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

Edited By : Nagaraj Tulugeri
PublicNext

PublicNext

02/06/2022 07:59 am

Cinque Terre

61.34 K

Cinque Terre

2

ಸಂಬಂಧಿತ ಸುದ್ದಿ