ನವದೆಹಲಿ: ನ್ಯಾಷನಲ್ ಹೆರಾಲ್ಡ್ ಹಗರಣದಲ್ಲಿ ನಿನ್ನೆ ವಿಚಾರಣೆಗಾಗಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಮುಂದೆ ಹಾಜರಾಗಿದ್ದ ಕಾಂಗ್ರೆಸ್ ನಾಯಕ ಹಾಗೂ ಸಂಸದ ರಾಹುಲ್ ಗಾಂಧಿ ಇಂದು ಮತ್ತೆ ಹಾಜರಾಗಲಿದ್ದಾರೆ.
ಇಡಿ ಸಮನ್ಸ್ ಹಿನ್ನೆಲೆ ಇಂದು ಬೆಳಗ್ಗೆ 11 ಗಂಟೆಗೆ ರಾಹುಲ್ ಗಾಂಧಿ ಅಧಿಕಾರಿಗಳ ಮುಂದೆ ಹಾಜರಾಗಲಿದ್ದಾರೆ. ಇ.ಡಿ ಅಧಿಕಾರಿಗಳು ಸಾಕಷ್ಟು ಪ್ರಶ್ನೆಗಳನ್ನು ಕೇಳಿದರೂ ಹಲವು ಪ್ರಶ್ನೆಗಳಿಗೆ ರಾಹುಲ್ ಗಾಂಧಿ ಸಮರ್ಪಕ ಉತ್ತರ ನೀಡಿಲ್ಲ ಎಂದು ಮೂಲಗಳು ಹೇಳಿವೆ. ರಾಹುಲ್ ಗಾಂಧಿ ಹಲವು ಪ್ರಶ್ನೆಗಳಿಗೆ ಪಕ್ಷದ ಹಿರಿಯ ನಾಯಕರು ಹಾಗೂ ಸಂಬಂಧಿಸಿದ ಸಿಬ್ಬಂದಿ ಕೇಳಿ ಉತ್ತರಿಸುವುದಾಗಿ ಹೇಳಿದ್ದಾರೆ. ರಾಹುಲ್ ಗಾಂಧಿ ಉತ್ತರದಿಂದ ಸಮಾಧಾನ ಆಗದ ಇಡಿ ಅಧಿಕಾರಿಗಳು ಇಂದು ದಾಖಲೆಗಳ ಸಹಿತ ವಿಚಾರಣೆಗೆ ಬನ್ನಿ ಎಂದು ಸೂಚನೆ ನೀಡಿದ್ದಾರೆ.
PublicNext
14/06/2022 10:49 am