ಬೆಂಗಳೂರು: ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಎಬಿವಿಪಿ ಕಾರ್ಯಕರ್ತರು ಅವರ ನಿವಾಸದ ಮುಂದೆ ದಿಢೀರ್ ಪ್ರತಿಭಟನೆ ನಡೆಸಿದ್ದರು. ಅಲ್ಲದೇ ಅವರ ಮನೆಯೊಳಗೆ ನುಗ್ಗಲು ಯತ್ನಿಸಿದ್ದರು. ಈ ದಾಂಧಲೆಗೆ ಕಾರಣರಾದ 30 ಕಾರ್ಯಕರ್ತರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಕರಾವಳಿ ಭಾಗದಲ್ಲಿ ಕೋಮುಗಲಭೆ, ಕೊಲೆಗಳ ಸಂಖ್ಯೆ ಹೆಚ್ಚಾಗಿವೆ. ರಾಜ್ಯದಲ್ಲಿ ಅರಾಜಕತೆ ತಾಂಡವವಾಡುತ್ತಿದೆ. ನಿಯಂತ್ರಿಸಬೇಕಿದ್ದಂತ ಗೃಹ ಸಚಿವರು ಅಸಮರ್ಥರಾಗಿದ್ದಾರೆ. ಕೂಡಲೇ ರಾಜೀನಾಮೆ ನೀಡಬೇಕು ಎಂಬುದಾಗಿ ಜಯಮಹಲ್ ನಲ್ಲಿರುವಂತ ಗೃಹ ಸಚಿವರ ಅರಗ ಜ್ಞಾನೇಂದ್ರ ಅವರ ಸರ್ಕಾರಿ ನಿವಾಸದ ಮುಂದೆ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು.
ಈ ಪ್ರತಿಭಟನೆಯ ವೇಳೆಯಲ್ಲಿ ಗೃಹ ಸಚಿವರ ನಿವಾಸದ ಒಳಗೂ ನುಗ್ಗೋದಕ್ಕೆ ಯತ್ನಿಸಲಾಗಿತ್ತು. ಹೀಗಾಗಿ ಜೆಸಿ ನಗರ ಪೊಲೀಸ್ ಠಾಣೆಯಲ್ಲಿ ಗೃಹ ಸಚಿವರ ನಿವಾಸದ ಮುಂದೆ ಪ್ರತಿಭಟನೆ ನಡೆಸಿದ ಎಬಿವಿಪಿಯ 30 ಕಾರ್ಯಕರ್ತರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬೆಂಗಳೂರಿನ ಜೆಸಿ ನಗರದ ಠಾಣೆಯಲ್ಲಿ 29 ಪುರುಷರು, ಓರ್ವ ಮಹಿಳಾ ಎಬಿವಿಪಿ ಕಾರ್ಯಕರ್ತೆ ಸೇರಿದಂತೆ 30 ಮಂದಿ ವಿರುದ್ಧ ಐಪಿಸಿ ಸೆಕ್ಷನ್ 448, 143, 147, 149 ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ.
PublicNext
30/07/2022 06:41 pm