ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು : ಹರ್ಷ ಕೊಲೆ ಪ್ರಕರಣ ಕೋರ್ಟ್'ಗೆ ಚಾರ್ಜ್ ಶೀಟ್ ಸಲ್ಲಿಸಿದ ಎನ್.ಐ.ಎ

ಬೆಂಗಳೂರು/ ಶಿವಮೊಗ್ಗ : ಭಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ.

750ಕ್ಕೂ ಹೆಚ್ಚು ಪುಟಗಳ ಚಾರ್ಜ್' ಶೀಟ್​ನಲ್ಲಿ ಆತಂಕಕಾರಿ ಮಾಹಿತಿಯೊಂದು ಬೆಳಕಿಗೆ ಬಂದಿದೆ.

ಹೌದು ! ಫೆಬ್ರವರಿ 20 ರಂದು ರಾತ್ರಿ ಶಿವಮೊಗ್ಗದಲ್ಲಿ ನಡೆದ ಭಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ರಾಜ್ಯದಲ್ಲಿ ಸಂಚಲನವನ್ನುಂಟು ಮಾಡಿತ್ತು. ಹಿಜಾಬ್ ವಿವಾದದ ಮದ್ಯೆ ನಡೆದ ಹತ್ಯೆ ವಿಚಾರವನ್ನು ಪೊಲೀಸ್ ಇಲಾಖೆ ಗಂಭೀರವಾಗಿ ತನಿಖೆ ನಡೆಸಿ ಆರೋಪಿಗಳನ್ನ ಬಂಧಿಸಿತ್ತು. ಈ ಮದ್ಯೆ ಸರ್ಕಾರ ಈ ಕೊಲೆ ಪ್ರಕರಣವನ್ನು ಎನ್. ಐ.ಎ ತನಿಖೆಗೆ ಹಸ್ತಾಂತರಿಸಿತ್ತು.

ತನಿಖೆ ಆರಂಭಿಸಿದ ಎನ್​.ಐ.ಎ ಅಧಿಕಾರಿಗಳು ಕೈಗೊಂಡಿದ್ದ ವಿಶೇಷ ನ್ಯಾಯಾಲಯಕ್ಕೆ 750 ಕ್ಕೂ ಹೆಚ್ಚು ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.

ವಿಶೇಷ ನ್ಯಾಯಾಲಯಕ್ಕೆ ಹತ್ತು ಮಂದಿ ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದ್ದು, ಈ ದೋಷಾರೋಪ ಪಟ್ಟಿಯಲ್ಲಿ ಆರೋಪಿಗಳಿಗೆ ಹಿಂದೂ ಸಂಘಟನೆಯ ಕಾರ್ಯಕರ್ತನ ಹತ್ಯೆ ಮಾಡೋದೇ ಮುಖ್ಯ ಉದ್ದೇಶ ಆಗಿತ್ತು. ಹೀಗಾಗಿಯೇ ಹಿಂದೂ ವ್ಯಕ್ತಿಯೊಬ್ಬನ ಹತ್ಯೆ ಮಾಡಿದ್ರೆ ಭಯದ ವಾತಾವರಣ ನಿರ್ಮಾಣವಾಗತ್ತೆ ಅಂತ ಪ್ಲಾನ್ ಮಾಡಿಕೊಂಡು 15 ದಿನಗಳಿಂದ ಹರ್ಷನ ಹತ್ಯೆಗೆ ಕಾದು ಕುಳಿತಿದ್ರೂ. ಹರ್ಷ ಹಿಂದೂ ಸಂಘಟನೆಯಲ್ಲಿ ಸಕ್ರೀಯನಾಗಿದ್ದು, ಹಳೇಯ ದ್ವೇಷ ಇಟ್ಟುಕೊಂಡು ಹತ್ಯೆ ಮಾಡೋಕೆ ಪ್ರಕರಣದ ಎ-1 ಆರೋಪಿ ಆಯ್ಕೆ ಮಾಡಿಕೊಂಡಿದ್ದ.

ಈ ಹತ್ಯೆ ಹಿಂದೆ ಯಾವುದೇ ಸಂಘಟನೆ ಕೈವಾಡ ಇಲ್ಲಾ, ಹತ್ಯೆಗೆ ಮಾರಕಾಸ್ತ್ರ ಖರೀದಿ ಮಾಡಲು ಹಣದ ಅಗತ್ಯ ಇತ್ತು. ಅದಕ್ಕಾಗಿ ಆರೋಪಿಗಳು ಕುಂಶಿ ಬಳಿ ಒಂದು ಮನೆ ಕಳ್ಳತನ ಮಾಡಿದ್ದರು. ಮನೆಯಲ್ಲಿ ಸಿಕ್ಕಿದ್ದ ಹಣದಲ್ಲೇ ಮಚ್ಚು, ಲಾಂಗು ಸೇರಿದಂತೆ ಮಾರಕಾಸ್ತ್ರ ಖರೀದಿ ಮಾಡಲಾಗಿತ್ತು. ಬಂಧಿತ ಆರೋಪಿಗಳಲ್ಲಿ ರೋಷನ್ ಭದ್ರಾವತಿಯಲ್ಲಿ ಮಾರಕಾಸ್ತ್ರಗಳನ್ನು ಖರೀದಿ ಮಾಡಿದ್ದ. ಬಂಧಿತ ಆರೋಪಿಗಳಲ್ಲಿ ಮೂವರನ್ನು ಹೊರತುಪಡಿಸಿ ಉಳಿದವರೆಲ್ಲ ಹಿಂದೆ ಹಲವು ಕೇಸ್'ಗಳಲ್ಲಿ ಭಾಗಿಯಾಗಿದ್ದ ಆರೋಪಿಗಳೇ ಎಂದು ಚಾರ್ಜ್ ಶೀಟ್​ನಲ್ಲಿ ಉಲ್ಲೇಖವಾಗಿದೆ.

ಇನ್ನೂ ಎನ್.ಐ.ಎ ಅಧಿಕಾರಿಗಳು ಬಂಧಿತ 10 ಮಂದಿ ಆರೋಪಿಗಳ ಹೇಳಿಕೆಗಳ ಜೊತೆ ತಾಂತ್ರಿಕ ಸಾಕ್ಷ್ಯಗಳನ್ನ ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಿದ್ದಾರೆ. ಸದ್ಯದ ತನಿಖೆಯಲ್ಲಿ ಆರೋಪಿಗಳು ಕೋಮು ಸೌಹಾರ್ದತೆ ಕದಡುವುದರ ಜೊತೆಗೆ ಗಲಾಟೆಯನ್ನುಂಟು ಮಾಡುವ ಉದ್ದೇಶದ ವಿಚಾರ ಬೆಳಕಿಗೆ ಬಂದಿದೆ‌.

Edited By : Somashekar
PublicNext

PublicNext

03/09/2022 08:00 pm

Cinque Terre

189.69 K

Cinque Terre

11

ಸಂಬಂಧಿತ ಸುದ್ದಿ