ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೈಸೂರು: ಬಿಜೆಪಿ ಮುಖಂಡನ ಹನಿ ಟ್ರ್ಯಾಪ್ ಕೇಸ್‌ಗೆ ಬಿಗ್ ಟ್ವಿಸ್ಟ್; ತಪ್ಪು ಮುಚ್ಚೋಕೆ ದೂರು ಕೊಟ್ರಾ ಜಗನ್ನಾಥ್?

ಬಿಜೆಪಿ ಮುಖಂಡ ಹಾಗೂ ಚಿನ್ನದ ವ್ಯಾಪಾರಿ ಜಗನ್ನಾಥ ಶೆಟ್ಟಿ ಹನಿಟ್ರ್ಯಾಫ್ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಎಫ್ಐಆರ್ ನಲ್ಲಿ ದಾಖಲೆಯಾದ ವಿಷಯ ಬೇರೆ, ಅಲ್ಲಿ ನಡೆದಿರುವ ಘಟನೆ ಬೇರೆಯಾಗಿದೆ. ಈ ಬಗ್ಗೆ ಎಕ್ಸ್ ಕ್ಲೂಸಿವ್ ವಿಡಿಯೋವೊಂದು ವೈರಲ್ ಆಗಿದೆ.

ಮೈಸೂರಿನ ದರ್ಶನ್ ಲಾಡ್ಜ್ ಗೆ ಏಕಾಏಕಿ ಸಲ್ಮಾ ಗ್ಯಾಂಗ್ ನುಗ್ಗಿದ್ದು, ಯುವತಿ ಜೊತೆ ರೆಡ್ ಹ್ಯಾಂಡಾಗಿ ಚಿನ್ನದ ವ್ಯಾಪಾರಿ ಕಂ ಬಿಜೆಪಿ ಮುಖಂಡ ಜಗನ್ನಾಥ್ ಶೆಟ್ಟಿ ಸಿಕ್ಕಿಬಿದ್ದಿದ್ದಾರೆ. ಕಾಲೇಜ್ ಲೆಕ್ಚರರ್ ಎಂದು ಲಾಡ್ಜ್ ನಲ್ಲಿದ್ದು, ಯುವತಿ ಜೊತೆ ಜಗನ್ನಾಥ ಇರುವ ವಿಚಾರ ತಿಳಿದು ಅಲರ್ಟ್ ಆದ ಸಲ್ಮಾ ಆ್ಯಂಡ್ ಗ್ಯಾಂಗ್ ತಕ್ಷಣ ಮೈಸೂರಿನ ದರ್ಶನ್ ಲಾಡ್ಜ್ ಗೆ ನುಗ್ಗಿದ್ದಾರೆ.

ಒಳ ನುಗ್ಗುತ್ತಿದ್ದಂತೆ ಗ್ಯಾಂಗ್ ವಿಡಿಯೋ ಚಿತ್ರೀಕರಣ ಮಾಡಿದ್ದು, ಯುವತಿ ಮತ್ತು ಜಗನ್ನಾಥ ಶೆಟ್ಟಿಗೆ ಮನಬಂದಂತೆ ಥಳಿಸಿದ್ದಾರೆ. ಸದ್ಯ ಜಗನ್ನಾಥ ಶೆಟ್ಟಿ ನಡೆ ಹಲವು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ. ಸದ್ಯ ಮೂವರು ಆರೋಪಿಗಳನ್ನು ಪೊಲೀಸರು ಜೈಲಿಗಟ್ಟಿದ್ದು, ಮಂಡ್ಯ ಪಶ್ಚಿಮ ವಿಭಾಗ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು.

ಪ್ರಕರಣದ ಹಿನ್ನೆಲೆಯನ್ನು ನೋಡುವುದಾದರೆ

ಆರ್ ಎಸ್ ಎಸ್, ಬಿಜೆಪಿ ಮುಖಂಡ ಹನಿಟ್ರ್ಯಾಪ್ ಸುಳಿಯಲ್ಲಿ ಸಿಲುಕಿ ಹಾಕಿಕೊಂಡಿದ್ದು, 50 ಲಕ್ಷ ಹಣವನ್ನು ಸುಲಿಗೆ ಮಾಡಲಾಗಿದೆ. ಈ ಸಂಬಂಧ ಮಂಡ್ಯದ ಪಶ್ಚಿಮ ಪೊಲೀಸ್ ಠಾಣೆಗೆ ಪ್ರತಿಷ್ಠಿತ ಜಗನ್ನಾಥ ಶೆಟ್ಟಿ ದೂರು ನೀಡಿದ್ದರು. ದಕ್ಷಿಣ ಕನ್ನಡ ಜಿಲ್ಲೆ ಬಿಜೆಪಿ ಮುಖಂಡ, ಧಾರ್ಮಿಕ ಪರಿಷತ್ ಸದಸ್ಯ ಜಗನ್ನಾಥ ಶೆಟ್ಟಿ, ಮಂಡ್ಯದ ಶ್ರೀನಿಧಿ ಗೋಲ್ಡ್ ಮಾಲೀಕರಾಗಿದ್ದಾರೆ.

ಜಗನ್ನಾಥ ಶೆಟ್ಟಿ ಮಂಗಳೂರಿಗೆ ತೆರಳಲು ಮಂಡ್ಯದಲ್ಲಿ ಬಸ್ಗಾಗಿ ಕಾಯುತ್ತಿದ್ದರು. ಈ ವೇಳೆ ನಾಲ್ವರು ಮೈಸೂರಿಗೆ ಡ್ರಾಪ್ ಕೊಡುವುದಾಗಿ ಕಾರಿನಲ್ಲಿ ಕರೆದೊಯ್ದಿದ್ದರು. ನಂತರ ಚಿನ್ನದ ಪರೀಕ್ಷೆಗೆಂದು ಅಪಹರಿಸಿದ್ದಾರೆ. ಜಗನ್ನಾಥ ಶೆಟ್ಟಿ ಅವರನ್ನು ಅಪಹರಿಸಿ ಲಾಡ್ಜ್ ರೂಮ್ಗೆ ಕರೆದುಕೊಂಡು ಹೋಗಿದ್ದಾರೆ.

ರೂಮ್ನಲ್ಲಿ ಯುವತಿ ಜೊತೆ ವಿಡಿಯೋ ಚಿತ್ರೀಕರಿಸಿಕೊಂಡು 4 ಕೋಟಿ ರೂ. ಬೇಡಿಕೆ ಇಟ್ಟಿದ್ದಾರೆ. ಅಂತಿಮವಾಗಿ ಜಗನ್ನಾಥ ಶೆಟ್ಟಿ 50 ಲಕ್ಷ ರೂಪಾಯಿ ನೀಡಿ ತೆರಳಿದ್ದಾರೆ. ಇಷ್ಟಕ್ಕೆ ಸುಮ್ಮನಾದ ಗ್ಯಾಂಗ್ ಮತ್ತೆ ಹಣಕ್ಕೆ ಬೇಡಿಕೆಯಿಟ್ಟಿದ್ದಾರೆ. ಇದರಿಂದ ಜಗನ್ನಾಥ ಶೆಟ್ಟಿ ದೂರು ನೀಡಿದ್ದಾರೆ. ದೂರಿನ ಆಧಾರದ ಮೇರೆಗೆ ಸಮಾಜ ಸೇವೆ, ಮಾನವ ಹಕ್ಕು ಹೋರಾಟದಲ್ಲಿ ಗುರುತಿಸಿಕೊಂಡಿದ್ದ ಸಲ್ಮಾಭಾನು ಎಂಬುವರನ್ನು ಪಶ್ಚಿಮ ಠಾಣೆ ಪೊಲೀಸರು ಬಂಧಿಸಿದ್ದಾರೆ.

Edited By :
PublicNext

PublicNext

08/09/2022 08:43 pm

Cinque Terre

93.5 K

Cinque Terre

2

ಸಂಬಂಧಿತ ಸುದ್ದಿ