ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಸೀದಿ ಧ್ವನಿವರ್ಧಕ ವಿಚಾರದಲ್ಲಿ ನಮ್ಮನ್ನು ಟಾರ್ಗೆಟ್ ಮಾಡಲಾಗಿದೆ: ರಾಜ್ ಠಾಕ್ರೆ

ಮುಂಬೈ: ನಾವು ಸುಪ್ರೀಂ ಕೋರ್ಟ್ ಆದೇಶ ಪಾಲನೆಗಾಗಿ ಹೋರಾಡುತ್ತಿದ್ದೇವೆ. ಅದ್ರೆ ಈ ವಿಚಾರವಾಗಿ ಮಹಾರಾಷ್ಟ್ರ ಸರ್ಕಾರವು ನಮ್ಮ ಪಕ್ಷ ಹಾಗೂ ಕಾರ್ಯಕರ್ತರನ್ನು ಗುರಿಯಾಗಿಸಿದೆ ಎಂದು ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಅಧ್ಯಕ್ಷ ರಾಜ್ ಠಾಕ್ರೆ ಆರೋಪಿಸಿದ್ದಾರೆ.

ಕಾನೂನು ಬಾಹಿರ ಧ್ವನಿವರ್ಧಕಗಳ ವಿರುದ್ಧ ಹೋರಾಡುತ್ತಿರುವ ನಮ್ಮ ಪಕ್ಷದ ಕಾರ್ಯಕರ್ತರನ್ನು ಬಂಧಿಸಲಾಗುತ್ತಿದೆ. ಯಾಕೆ ನಮ್ಮವರಿಗಷ್ಟೇ ಹೀಗೆ ಮಾಡಲಾಗುತ್ತಿದೆ? ನಿಯಮಗಳನ್ನು ಪಾಲಿಸುತ್ತಿರುವವರ ಮೇಲೆ ಯಾಕೆ‌ ಕ್ರಮ ಕೈಗೊಳ್ಳುತ್ತಿದ್ದೀರಿ? ಎಂದು ರಾಜ್ ಠಾಕ್ರೆ ಪ್ರಶ್ನಿಸಿದ್ದಾರೆ.

ಸಿಆರ್‌ಪಿಸಿ ಸೆಕ್ಷನ್ 149 ಅಡಿಯಲ್ಲಿ ಮಹಾರಾಷ್ಟ್ರ ನವನಿರ್ಮಾಣ ಸೇನೆಯ ನಾಯಕರು ಹಾಗೂ ಕಾರ್ಯಕರ್ತರು ಸೇರಿ 18 ಸಾವಿರ ಜನರಿಗೆ ನೋಟಿಸ್ ನೀಡಲಾಗಿದೆ.

Edited By : Nagaraj Tulugeri
PublicNext

PublicNext

04/05/2022 04:36 pm

Cinque Terre

190.93 K

Cinque Terre

25

ಸಂಬಂಧಿತ ಸುದ್ದಿ