ಚಿತ್ರದುರ್ಗ : ಮುರುಘಾಮಠದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ ಸಂಬಂಧ ಇಬ್ಬರು ಬಾಲಕಿಯರು ಮೈಸೂರಿನಿಂದ ಚಿತ್ರದುರ್ಗಕ್ಕೆ ಶಿಫ್ಟ್ ಮಾಡಲಾಗಿದೆ.
ಪೊಲೀಸರ ಭದ್ರತೆಯಲ್ಲಿ ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಇಬ್ಬರು ಬಾಲಕಿಯರನ್ನು ಮೈಸೂರಿನಿಂದ ಚಿತ್ರದುರ್ಗಕ್ಕೆ ಶಿಫ್ಟ್ ಮಾಡಲಾಗಿದೆ. ಸದ್ಯ ಇಬ್ಬರು ಬಾಲಕಿಯರು ಬಾಲಭವನದಲ್ಲಿದ್ದಾರೆ. ಇಂದು ಬೆಳಗ್ಗೆ 10 ಗಂಟೆಗೆ ಜಡ್ಜ್ ಎದುರು ಹೇಳಿಕೆ ಸಾಧ್ಯತೆ ಇದೆ. ನಂತರ ಬಾಲಕಿಯರಿಗೆ ವೈದ್ಯಕೀಯ ಪರೀಕ್ಷೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಇನ್ನು ತಮ್ಮ ವಿರುದ್ಧದ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಮುರುಘಾ ಶರಣರು, ಇದು ದೊಡ್ಡ ಮಟ್ಟದ ಕಿರುಕುಳ ಮತ್ತು ಪಿತೂರಿಯಾಗಿದೆ. ಸಣ್ಣವರಿಗೆ ಸಣ್ಣ ಕುತ್ತು, ದೊಡ್ಡವರಿಗೆ ದೊಡ್ಡ ಕುತ್ತು ಬಂದಿದೆ. ನಮ್ಮ ವಿರುದ್ಧ ಪಿತೂರಿ, ಒಳಸಂಚು ಮಾಡಿದ್ದಾರೆ. ಇದರ ಬಗ್ಗೆ ಸಮರಕ್ಕೂ ಸಿದ್ದ. ಯಾವ ಸಮಸ್ಯೆ ಶಾಶ್ವತ ಅಲ್ಲ, ಯಾವ ಸುಖವೂ ಶಾಶ್ವತ ಅಲ್ಲ. ಎಲ್ಲವೂ ತಾತ್ಕಾಲಿಕ ಎಲ್ಲವನ್ನು ಕಾಲವೇ ನಿರ್ಣಯ ಮಾಡುತ್ತೆ ಎಂದಿದ್ದಾರೆ.
PublicNext
28/08/2022 07:45 am