ನವದೆಹಲಿ: ಯಾರೇ ಬಂದರೂ ನಾವು ಹೆದರೋದಿಲ್ಲ. ನಮ್ಮ ಪ್ರತಿಭಟನೆ ನಡೆಸಿಯೇ ನಡೆಸುತ್ತೇವೆ ಎಂದು ಮಾಧ್ಯಮದ ಮುಂದೆ ಹೇಳಿದ್ದ ರಾಷ್ಟ್ರೀಯ ಯೂತ್ ಕಾಂಗ್ರೆಸ್ ನಾಯಕ ಬಿ.ವಿ ಶ್ರೀನಿವಾಸ್ ಪೊಲೀಸರನ್ನು ಕಂಡ ಕೂಡಲೇ ಓಟ ಕಿತ್ತಿದ್ದಾರೆ.
ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಈ ಘಟನೆ ನಡೆದಿದೆ. ಎಐಸಿಸಿ ನಾಯಕ ರಾಹುಲ್ ಗಾಂಧಿ ಅವರನ್ನು ನ್ಯಾಷನಲ್ ಹೆರಾಲ್ಡ್ ಪ್ರಕರಣದ ಅಡಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಇಂದು ವಿಚಾರಣೆಗೆ ಒಳಪಡಿಸಿದ್ದಾರೆ. ಇದನ್ನು ವಿರೋಧಿಸಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನೆಗೆ ಪೊಲೀಸರು ಅನುಮತಿಸಿರಲಿಲ್ಲ. ಆದರೂ ಪ್ರತಿಭಟನೆಗೆ ಸಜ್ಜಾಗಿದ್ದ ಯೂತ್ ಕಾಂಗ್ರೆಸ್ ನಾಯಕ ಬಿ.ವಿ ಶ್ರೀನಿವಾಸ್ ಅವರನ್ನು ಪೊಲೀಸರು ಬಂಧಿಸಲು ಮುಂದಾಗಿದ್ದಾರೆ. ಈ ವೇಳೆ ಪೊಲೀಸ್ ಅಧಿಕಾರಿಯ ಹಿಡಿತದಿಂದ ತಪ್ಪಿಸಿಕೊಂಡ ಶ್ರೀನಿವಾಸ್ ಕ್ಷಣಾರ್ಧದಲ್ಲಿ ಅಲ್ಲಿಂದ ಕಾಲ್ಕಿತ್ತಿದ್ದಾರೆ. ಅವರ ಓಟದ ವಿಡಿಯೋ ಈಗ ವೈರಲ್ ಆಗಿದ್ದು ನೋಡಿದ ನೆಟ್ಟಿಗರು ಚಿತ್ರ-ವಿಚಿತ್ರ ಕಾಮೆಂಟ್ ಹಾಕುತ್ತಿದ್ದಾರೆ.
PublicNext
13/06/2022 04:50 pm